Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇಂಗ್ಲೆಂಡ್​ಗೆ ಹೀನಾಯ ಸೋಲುಣಿಸಿ ಹೊಸ ಇತಿಹಾಸ ಬರೆದ ಟೀಮ್ ಇಂಡಿಯಾ

India vs England 1st Odi: ಟೀಮ್ ಇಂಡಿಯಾ ಪರ 7.2 ಓವರ್​ಗಳಲ್ಲಿ ಕೇವಲ 19 ರನ್​ ನೀಡಿ 6 ವಿಕೆಟ್ ಉರುಳಿಸಿದ ಜಸ್​ಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

TV9 Web
| Updated By: ಝಾಹಿರ್ ಯೂಸುಫ್

Updated on: Jul 12, 2022 | 10:05 PM

ಭಾರತ-ಇಂಗ್ಲೆಂಡ್ ನಡುವಣ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳಿಂದ ಭರ್ಜರಿ ಜಯ ಸಾಧಿಸಿದೆ. ಕಿಯಾ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 8
 ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಇಂಗ್ಲೆಂಡ್ ಬ್ಯಾಟ್ಸ್​ಮನ್​ಗಳಿಗೆ ಬ್ಯಾಕ್ ಟು ಬ್ಯಾಕ್ ಶಾಕ್ ನೀಡಿದ್ದರು. ಪರಿಣಾಮ ಕೇವಲ 26 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ 5 ಪ್ರಮುಖ ಬ್ಯಾಟ್ಸ್​​ಮನ್​ಗಳು ಪೆವಿಲಿಯನ್​ಗೆ ಮರಳಿದ್ದರು.

2 / 8
 ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ರನ್​ಗಳಿಸುವ ಮೂಲಕ ತಂಡಕ್ಕೆ ಆಸರೆಯಾಗಿದ್ದರು. ಆದರೆ ಮೊಹಮ್ಮದ್ ಶಮಿ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಬಟ್ಲರ್ ಕೂಡ ಔಟಾದರು. ಒಂದು ಹಂತದಲ್ಲಿ ಕೇವಲ 68 ರನ್​ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಡೇವಿಡ್ ವಿಲ್ಲಿ ಆಸರೆಯಾಗಿ ನಿಂತರು.

3 / 8
ಅದರಂತೆ ವಿಲ್ಲಿ 21 ರನ್​ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮ ಇಂಗ್ಲೆಂಡ್ ತಂಡದ ಮೊತ್ತ ನೂರರ ಗಡಿದಾಟಿತು. ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳ ಮುಂದೆ 26 ಓವರ್​ಗಳನ್ನು ದಾಟಲು ಆಂಗ್ಲ ಆಟಗಾರರಿಗೆ ಸಾಧ್ಯವಾಗಿಲ್ಲ. ಅಂತಿಮವಾಗಿ ಕೇವಲ 25.2 ಓವರ್​ಗಳಲ್ಲಿ 110 ರನ್​ಗಳಿಗೆ ಸರ್ವಪತನ ಕಂಡಿತು. ಟೀಮ್ ಇಂಡಿಯಾ ಪರ ಬುಮ್ರಾ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದ್ದರು.

4 / 8
ವಿಶೇಷ ಎಂದರೆ ಕೇವಲ 110 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ತನ್ನ ದಾಖಲೆಯನ್ನು ಪುನರ್​ನಿರ್ಮಿಸಿದರು. ಅಂದರೆ ಇದು ಟೀಮ್ ಇಂಡಿಯಾ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ತಂಡದ ಅತ್ಯಂತ ಕೆಟ್ಟ ಪ್ರದರ್ಶನವಾಗಿದೆ.

5 / 8
ಈ ಹಿಂದೆ 2006 ರಲ್ಲಿ ಜೈಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 125 ರನ್​ಗಳಿಗೆ ಆಲೌಟ್ ಆಗಿದ್ದು ಹೀನಾಯ ಪ್ರದರ್ಶನವಾಗಿತ್ತು. ಇದೀಗ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಮತ್ತೊಮ್ಮೆ ಕೆಟ್ಟ ಪ್ರದರ್ಶನ ನೀಡಿದೆ. ಅದರಲ್ಲೂ ಭಾರತದ ವಿರುದ್ದ ತವರಿನಲ್ಲೇ ಕೇವಲ 110 ರನ್​ಗಳಿಗೆ ಆಲೌಟ್ ಆಗಿ ಇಂಗ್ಲೆಂಡ್ ತಂಡ ಮುಖಭಂಗ ಅನುಭವಿಸಿದೆ.

6 / 8
ಇನ್ನು ಇಂಗ್ಲೆಂಡ್ ನೀಡಿದ 111 ಟಾರ್ಗೆಟ್​ ಅನ್ನು ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ವಿಕೆಟ್ ನಷ್ಟವಿಲ್ಲದೆ 18.4 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

7 / 8
ವಿಶೇಷ ಎಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ದ 10 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಮೂಲಕ ಕ್ರಿಕೆಟ್ ಜನಕರಿಗೆ ತವರಿನಲ್ಲೇ ಹೀನಾಯ ಸೋಲುಣಿಸಿ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

8 / 8
Follow us