AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 60 ವರ್ಷಗಳ ಹಳೆಯ ದಾಖಲೆ ಉಡೀಸ್: ಸೋತರೂ ಗೆದ್ದ ಬಾಝ್​ಬಾಲ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲೆರಡು ಟೆಸ್ಟ್ ಪಂದ್ಯಗಳು ಮುಗಿದಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇನ್ನು ಐದು ಪಂದ್ಯಗಳ ಈ ಸರಣಿಯ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ ಶುರುವಾಗಲಿದೆ.

TV9 Web
| Edited By: |

Updated on: Feb 06, 2024 | 7:24 AM

Share
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 106 ರನ್​ಗಳಿಂದ ಸೋಲನುಭವಿಸಿದೆ. ವಿಶಾಖಪಟ್ಟಣಂನಲ್ಲಿ ನಡೆದ ಈ ಪಂದ್ಯದ ನಾಲ್ಕನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ 399 ರನ್​ಗಳ ಗುರಿ ನೀಡಿತ್ತು.

1 / 6
ಈ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆಯಿತು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಇಂಗ್ಲೆಂಡ್ ತಂಡವು 292 ರನ್​ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಟೀಮ್ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿ ಸರಣಿಯನ್ನು 1-1 ಅಂತರದಿಂದ ಸಮಗೊಳಿಸಿದೆ.

2 / 6
ವಿಶೇಷ ಎಂದರೆ ಈ ಸೋಲಿನ ಹೊರತಾಗಿಯೂ ಇಂಗ್ಲೆಂಡ್ ತಂಡ ಬಾಝ್​ಬಾಲ್ ಭಾರತದಲ್ಲಿ ಮತ್ತೊಮ್ಮೆ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿಯೇ 292 ರನ್​ಗಳೊಂದಿಗೆ ಇಂಗ್ಲೆಂಡ್ ಹೊಸ ದಾಖಲೆ ಬರೆದಿರುವುದು.

3 / 6
ಅಂದರೆ ಭಾರತದಲ್ಲಿ ಇಂಗ್ಲೆಂಡ್ ತಂಡ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಯಾವತ್ತೂ 250 ರನ್​ಗಳ ಗಡಿದಾಟಿರಲಿಲ್ಲ. ಈ ಹಿಂದೆ 1964 ರಲ್ಲಿ 241 ರನ್​ಗಳಿಸಿದ್ದು ಅತ್ಯುತ್ತಮ ಸಾಧನೆಯಾಗಿತ್ತು. ಆದರೆ ಈ ಬಾರಿ ಆಂಗ್ಲರು ನಾಲ್ಕನೇ ಇನಿಂಗ್ಸ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಈ ಮೂಲಕ 60 ವರ್ಷಗಳ ಹಳೆಯ ದಾಖಲೆಯನ್ನೇ ಅಳಿಸಿ ಹಾಕಿದೆ.

4 / 6
ಟೆಸ್ಟ್ ಕ್ರಿಕೆಟ್​ನಲ್ಲಿ ಆಕ್ರಮಣಕಾರಿ ಆಟದೊಂದಿಗೆ ಮಿಂಚುತ್ತಿರುವ ಇಂಗ್ಲೆಂಡ್ ತಂಡವು ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಅದೇ ಬಾಝ್​ಬಾಲ್ ಪ್ರದರ್ಶನ ನೀಡಿದೆ. ಈ ಪ್ರದರ್ಶನದ ಫಲವಾಗಿ ಇದೀಗ 60 ವರ್ಷಗಳ ಬಳಿಕ ಇಂಗ್ಲೆಂಡ್ ತಂಡವು 292 ರನ್​ಗಳಿಸಿದೆ. ಈ ಸೋಲಿನ ಹೊರತಾಗಿ ವಿಶೇಷ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದೆ.

5 / 6
ಅಷ್ಟೇ ಅಲ್ಲದೆ ಇದು ನಾಲ್ಕನೇ ಇನಿಂಗ್ಸ್​ನಲ್ಲಿ ಪ್ರವಾಸಿ ತಂಡವೊಂದು ಭಾರತ ವಿರುದ್ಧ ಕಲೆಹಾಕಿದ 2ನೇ ಅತ್ಯುತ್ತಮ ಸ್ಕೋರ್. ಇದಕ್ಕೂ ಮುನ್ನ 2017 ರಲ್ಲಿ ಶ್ರೀಲಂಕಾ ತಂಡ 299 ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು. ಇದೀಗ ಏಷ್ಯಾ ತಂಡದ ಹೊರತಾಗಿಯೂ ಇಂಗ್ಲೆಂಡ್ ಸ್ಪಿನ್ ಸ್ನೇಹಿ ಪಿಚ್​ನಲ್ಲಿ ನಾಲ್ಕನೇ ಇನಿಂಗ್ಸ್​ನಲ್ಲಿ 292 ರನ್ ಬಾರಿಸಿ ದಾಖಲೆ ಬರೆದಿರುವುದು ವಿಶೇಷ.

6 / 6
TV9 Web
TV9 Web

TV9 Kannada

Read More
Follow Us
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ