
ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಕುರಿತು ಬಿಗ್ ಅಪ್‌ಡೇಟ್ ನೀಡಿದ್ದಾರೆ. ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದಾಖಲೆ ನಿರ್ಮಿಸಿರುವ ಆಂಡರ್ಸನ್ ವಿಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಪಂದ್ಯವನ್ನಾಡುವುದಾಗಿ ತಿಳಿಸಿದ್ದಾರೆ.

ವಾಸ್ತವವಾಗಿ ಜುಲೈನಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಪಂದ್ಯ (10-14 ಜುಲೈ) ಆಂಡರ್ಸನ್ ವೃತ್ತಿಜೀವನದ ಕೊನೆಯ ಟೆಸ್ಟ್ ಪಂದ್ಯವಾಗಿರಲಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಆಂಡರ್ಸನ್ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಭಾರತ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಆ್ಯಂಡರ್ಸನ್ ಟೆಸ್ಟ್‌ನಲ್ಲಿ 700 ವಿಕೆಟ್‌ಗಳನ್ನು ಪೂರೈಸಿದ್ದ ಸಾಧನೆ ಮಾಡಿದ್ದ ಆಂಡರ್ಸನ್ ತಮ್ಮ ಪೋಸ್ಟ್ನಲ್ಲಿ, ‘ನಾನು ಇಂಗ್ಲೆಂಡ್ ತಂಡವನ್ನು ಬಹಳಷ್ಟು ಮಿಸ್ ಮಾಡಿಕೊಳ್ಳಲದ್ದೇನೆ. ಆದರೆ ಈಗ ನಿವೃತ್ತಿ ಹೊಂದಲು ಸರಿಯಾದ ಸಮಯ ಎಂದು ನನಗೆ ತಿಳಿದಿದೆ.

ಅಲ್ಲದೆ ನಾನು ಮಾಡಿದಂತೆ ಇತರರು ಅವರ ಕನಸುಗಳನ್ನು ನನಸು ಮಾಡಿಕೊಳ್ಳಲು ಅವಕಾಶ ಮಾಡಿಕೊಡುವುದು ಅವಶ್ಯಕ. ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಿಗುವ ಎಂದು ಬರೆದುಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ತಂಡ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ 3 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಸರಣಿಯ ಮೊದಲ ಟೆಸ್ಟ್ ಜುಲೈ 10 ರಿಂದ 14 ರವರೆಗೆ ಲಾರ್ಡ್ಸ್‌ನಲ್ಲಿ ನಡೆಯಲಿದೆ. ಇದು ಆಂಡರ್ಸನ್ ಅವರ ಕೊನೆಯ ಟೆಸ್ಟ್ ಪಂದ್ಯವಾಗಿರಲಿದೆ.

ವಾಸ್ತವವಾಗಿ ಆಂಡರ್ಸನ್ ಲಾರ್ಡ್ಸ್‌ನಲ್ಲಿ ಅಂತಾರಾಷ್ಟ್ರೀಯ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದರು. ಇದೀಗ ಅವರ ವೃತ್ತಿ ಬದುಕಿನ ಕೊನೆಯ ಪಂದ್ಯ ಕೂಡ ಇಲ್ಲೇ ನಡೆಯಲ್ಲಿದೆ. ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ ಆಡಿರುವ 187 ಟೆಸ್ಟ್‌ಗಳ 348 ಇನ್ನಿಂಗ್ಸ್‌ಗಳಲ್ಲಿ 700 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ 32 ಬಾರಿ 5 ವಿಕೆಟ್ ಹಾಗೂ 3 ಬಾರಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಲ್ಲದೆ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.