ಇಂಗ್ಲೆಂಡ್ ತಂಡದಿಂದ ಹೊರಬಿದ್ದ ಸ್ಟಾರ್ ಬೌಲರ್; ಈ ವರ್ಷ ಯಾವುದೇ ಪಂದ್ಯ ಆಡುವುದಿಲ್ಲ..!
Mark Wood: ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಇಂಜುರಿಯಿಂದಾಗಿ ಈ ವರ್ಷ ಅಂದರೆ 2024 ರಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
1 / 5
ಪ್ರಸ್ತುತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಮಾರ್ಕ್ ವುಡ್ ಇಂಜುರಿಯಿಂದಾಗಿ ಈ ವರ್ಷ ಅಂದರೆ 2024 ರಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
2 / 5
ಇಂಗ್ಲೆಂಡ್ ತಂಡಕ್ಕೆ ಈ ಸುದ್ದಿ ನುಂಗಲಾರದ ಬಿಸಿ ತುಪ್ಪವಾಗಿದೆ. ಏಕೆಂದರೆ ಈಗ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಇಂಗ್ಲೆಂಡ್ ಆ ಬಳಿಕ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳನ್ನು ಆಡಬೇಕಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ದೃಷ್ಟಿಯಿಂದ ಇಂಗ್ಲೆಂಡ್ಗೆ ಈ ಸರಣಿ ಬಹಳ ಮುಖ್ಯವಾಗಿದೆ. ಹಾಗಾಗಿ ತಂಡದ ಪ್ರಮುಖ ಬೌಲರ್ ಆಗಿರುವ ಮಾರ್ಕ್ ವುಡ್ ಎಕ್ಸ್ ಫ್ಯಾಕ್ಟರ್ ಆಗುವ ಸಾಧ್ಯತೆಗಳಿತ್ತು.
3 / 5
ಆದರೆ ಮೊಣಕೈ ಗಾಯದಿಂದ ಬಳಲುತ್ತಿರುವ ಮಾರ್ಕ್ ವುಡ್ ಒಂದು ವರ್ಷ ತಂಡದಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ವುಡ್ ಅವರ ಬಲ ಮೊಣಕೈ ಮೂಳೆಯಲ್ಲಿ ಗಾಯವಾಗಿದೆ ಎಂಬುದು ವೈದ್ಯಕೀಯ ಸ್ಕ್ಯಾನ್ ಮೂಲಕ ದೃಢಪಡಿಸಲಾಗಿದೆ. ಹೀಗಾಗಿ ಈ ವರ್ಷದ ಉಳಿದ ಪಂದ್ಯಗಳಲ್ಲಿ ಮಾರ್ಕ್ ವುಡ್ ಆಡುವುದಿಲ್ಲ ಎಂದಿದೆ.
4 / 5
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಮೊಣಕೈಗೆ ಗಾಯ ಮಾಡಿಕೊಂಡಿದ್ದ ಮಾರ್ಕ್ ವುಡ್ ಕೊನೆಯದಾಗಿ ಶ್ರೀಲಂಕಾ ವಿರುದ್ಧ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು. ಇದರೊಂದಿಗೆ ವುಡ್ ಅವರ ಬಲತೊಡೆಯ ಭಾಗಕ್ಕೂ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ, ವುಡ್ ತೊಡೆಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಅವರ ವೈದ್ಯಕೀಯ ತಂಡದೊಂದಿಗೆ ಪುನರ್ವಸತಿ ಪ್ರಕ್ರಿಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ECB ಹೇಳಿದೆ.
5 / 5
ಇಂಜುರಿಗೊಳಗಾಗಿರುವ ಮಾರ್ಕ್ ವುಡ್ ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ಡಿಸೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪ್ರಮುಖ ಟೆಸ್ಟ್ ಪಂದ್ಯಗಳಲ್ಲಿ ಆಡುವುದಿಲ್ಲ ಎಂದು ಇಸಿಬಿ ಖಚಿತಪಡಿಸಿದೆ. ಇಂಗ್ಲೆಂಡ್‌ನ ವೈಟ್‌ಬಾಲ್ ಪ್ರವಾಸ ಮತ್ತು 2025ರಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಫಿಟ್ ಆಗುವುದು ಅವರ ಗುರಿಯಾಗಿದೆ ಎಂದು ಮಂಡಳಿ ತಿಳಿಸಿದೆ.