AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಸ್ಟಾರ್ ಆಟಗಾರ ಗುಡ್ ಬೈ

Chris woakes retirement: ಇಂಗ್ಲೆಂಡ್ ತಂಡದ ಆಲ್ ರೌಂಡರ್ ಕ್ರಿಸ್ ವೋಕ್ಸ್ 15 ವರ್ಷಗಳ ತನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. 2011 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ವೃತ್ತಿಜೀವನ ಆರಂಭಿಸಿದ ವೋಕ್ಸ್ ಟೀಮ್ ಇಂಡಿಯಾ ವಿರುದ್ಧ ಕೊನೆಯ ಪಂದ್ಯವಾಡಿದ್ದರು.

ಝಾಹಿರ್ ಯೂಸುಫ್
|

Updated on: Sep 30, 2025 | 8:11 AM

Share
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಕ್ರಿಸ್ ವೋಕ್ಸ್ (Chris Woakes) ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಭಾರತದ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವೋಕ್ಸ್ ಪ್ರತಿಷ್ಠಿತ ಆ್ಯಶಸ್ ಸರಣಿಗೂ ಮುನ್ನ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

1 / 5
ಲಂಡನ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಪಂದ್ಯದ ವೇಳೆ ಕ್ರಿಸ್ ವೋಕ್ಸ್ ಗಾಯಗೊಂಡಿದ್ದರು. ಈ ಗಾಯದ ಹೊರತಾಗಿಯೂ ಒಂದೇ ಕೈಯಲ್ಲಿ ಬ್ಯಾಟಿಂಗ್‌ಗೆ ಆಗಮಿಸಿ ಗಮನ ಸೆಳೆದಿದ್ದರು. ಇದೀಗ ದಿಢೀರನೆ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

2 / 5
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಕ್ರಿಸ್ ವೋಕ್ಸ್, ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳುವ ಸಮಯ ಬಂದಿದೆ. ಇಂಗ್ಲೆಂಡ್ ಪರ ಆಡುವುದು ನನ್ನ ಬಾಲ್ಯದ ಕನಸಾಗಿತ್ತು. ಈ ಕನಸು ನನಸಾಗಿರುವುದು ನನ್ನ ಅದೃಷ್ಟ. ಕಳೆದ 15 ವರ್ಷಗಳಲ್ಲಿ ಇಂಗ್ಲೆಂಡ್ ತಂಡದಲ್ಲಿ ನನಗೆ ಹಲವಾರು ಸ್ನೇಹಿತರು ಸಿಕ್ಕಿದ್ದಾರೆ. ಅವರೆಲ್ಲರಿಗೂ, ನನ್ನನ್ನು ಬೆಂಬಲಿಸಿದವರಿಗೂ ಈ ಸಂದರ್ಭದಲ್ಲಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಕ್ರಿಸ್ ವೋಕ್ಸ್ ಬರೆದುಕೊಂಡಿದ್ದಾರೆ.

3 / 5
ಕ್ರಿಸ್ ವೋಕ್ಸ್ ಇಂಗ್ಲೆಂಡ್ ಪರ 62 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 99 ಇನಿಂಗ್ಸ್ ಆಡಿರುವ ಅವರು ಒಟ್ಟು 2034 ರನ್ ಕಲೆಹಾಕಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ 192 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

4 / 5
ಏಕದಿನ ಕ್ರಿಕೆಟ್‌ನಲ್ಲಿ 122 ಪಂದ್ಯಗಳನ್ನಾಡಿರುವ ಕ್ರಿಸ್ ವೋಕ್ಸ್ 1588 ರನ್ ಕಲೆಹಾಕಿದರೆ, 173 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ ಇಂಗ್ಲೆಂಡ್ ಪರ 33 ಟಿ20 ಪಂದ್ಯಗಳನ್ನಾಡಿರುವ ವೋಕ್ಸ್ 147 ರನ್ ಜೊತೆ 31 ವಿಕೆಟ್ ಪಡೆದಿದ್ದಾರೆ.

5 / 5