ICC T20I Rankings: 7ನೇ ಸ್ಥಾನಕ್ಕೆ ಜಾರಿದ ಹಾರ್ದಿಕ್ ಪಾಂಡ್ಯ; ಆಂಗ್ಲ ಆಲ್ರೌಂಡರ್ಗೆ ನಂ.1 ಪಟ್ಟ
ICC T20I Rankings: ಟಿ20 ವಿಶ್ವಕಪ್‌ನಲ್ಲಿ ತನ್ನ ಆಲ್‌ರೌಂಡರ್ ಪ್ರದರ್ಶನದ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವಂತೆ ಮಾಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಆಲ್ರೌಂಡರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು. ಆದರೆ ಆ ಬಳಿಕ ಪಾಂಡ್ಯ ಟಿ20 ಮಾದರಿಯಲ್ಲಿ ಹೆಚ್ಚು ಆಡದ ಕಾರಣ ತಮ್ಮ ಮೊದಲ ಸ್ಥಾನವನ್ನು ಬಿಟ್ಟುಕೊಟ್ಟಿರುವುದಲ್ಲದೆ, ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ.
1 / 6
ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಭರ್ಜರಿ ಮುಂಬಡ್ತಿ ಸಿಕ್ಕಿದೆ. ಅದರಂತೆ ಇಡೀ ಸರಣಿಯಲ್ಲಿ ತಮ್ಮ ಆಲ್‌ರೌಂಡರ್ ಪ್ರದರ್ಶನದ ಮೂಲಕ ಎಲ್ಲರ ಗಮನ ಸೆಳೆದಿದ್ದ ಲಿಯಾಮ್ ಲಿವಿಂಗ್‌ಸ್ಟೋನ್ ಭರ್ಜರಿ ಲಾಭ ಗಳಿಸಿದ್ದಾರೆ.
2 / 6
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ವೇಳೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ಮ್ಯಾಜಿಕ್ ಮಾಡಿದ್ದ ಇಂಗ್ಲೆಂಡ್ನ ಸ್ಟಾರ್ ಆಟಗಾರ ಲಿಯಾಮ್ ಲಿವಿಂಗ್‌ಸ್ಟೋನ್ ಆಲ್ರೌಂಡರ್ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ.
3 / 6
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ 124 ರನ್ ಕಲೆಹಾಕಿದ್ದ ಲಿಯಾಮ್, ಬೌಲಿಂಗ್‌ನಲ್ಲಿ ಒಟ್ಟು 5 ವಿಕೆಟ್ ಪಡೆದಿದ್ದರು. ಹೀಗಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ಬರೋಬ್ಬರಿ 7 ಸ್ಥಾನ ಜಿಗಿತ ಕಂಡಿರುವ ಅವರು 253 ರೇಟಿಂಗ್ ಪಾಯಿಂಟ್ಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.
4 / 6
ಲಿವಿಂಗ್‌ಸ್ಟೋನ್ ಅಗ್ರಸ್ಥಾನಕ್ಕೇರಿದ ಪರಿಣಾಮವಾಗಿ ಇದಕ್ಕೂ ಮುನ್ನ ನಂಬರ್ ಒನ್ ಸ್ಥಾನದಲ್ಲಿದ್ದ ಮಾರ್ಕಸ್ ಸ್ಟೊಯಿನಿಸ್ ಇದೀಗ ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ದೊಡ್ಡ ಸಂಗತಿಯೆಂದರೆ ಮೊದಲ ಸ್ಥಾನದಲ್ಲಿರುವ ಲಿವಿಂಗ್‌ಸ್ಟೋನ್ ಅವರ ರೇಟಿಂಗ್ ಪಾಯಿಂಟ್ 253 ಇದ್ದರೆ, ಎರಡನೇ ಸ್ಥಾನದಲ್ಲಿರುವ ಮಾರ್ಕಸ್ ಸ್ಟೊಯಿನಿಸ್ ಅವರ ರೇಟಿಂಗ್ ಪಾಯಿಂಟ್ 211 ಆಗಿದೆ.
5 / 6
ಮಾರ್ಕಸ್ ಸ್ಟೊಯಿನಿಸ್ ಹೊರತುಪಡಿಸಿ, ಜಿಂಬಾಬ್ವೆಯ ಸಿಕಂದರ್ ರಾಝಾ, ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಶ್ರೀಲಂಕಾದ ವನಿಂದು ಹಸರಂಗಾ ಮತ್ತು ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ತಲಾ ಒಂದು ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಭಾರತದ ಹಾರ್ದಿಕ್ ಪಾಂಡ್ಯ ಮತ್ತು ನೇಪಾಳದ ದೀಪೇಂದ್ರ ಐರಿ ಕೂಡ ಒಂದು ಸ್ಥಾನ ಕುಸಿದಿದ್ದಾರೆ.
6 / 6
ವಾಸ್ತವವಾಗಿ ಟಿ20 ವಿಶ್ವಕಪ್‌ನಲ್ಲಿ ತನ್ನ ಆಲ್‌ರೌಂಡರ್ ಪ್ರದರ್ಶನದ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುವಂತೆ ಮಾಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ಆಲ್ರೌಂಡರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು. ಆದರೆ ಆ ಬಳಿಕ ಪಾಂಡ್ಯ ಟಿ20 ಮಾದರಿಯಲ್ಲಿ ಹೆಚ್ಚು ಆಡದ ಕಾರಣ ತಮ್ಮ ಮೊದಲ ಸ್ಥಾನವನ್ನು ಬಿಟ್ಟುಕೊಟ್ಟಿರುವುದಲ್ಲದೆ, ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ.