AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತ ಇಂಗ್ಲೆಂಡ್

England vs South Africa, 1st ODI: ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 24.3 ಓವರ್​ಗಳಲ್ಲಿ 131 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20.5 ಓವರ್​ಗಳಲ್ಲಿ 137 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಸೌತ್ ಆಫ್ರಿಕಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 03, 2025 | 2:53 PM

Share
ಸೌತ್ ಆಫ್ರಿಕಾ (South Africa) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡ ಸೋಲನುಭವಿಸಿದೆ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಸೌತ್ ಆಫ್ರಿಕಾ ಬೌಲರ್​ಗಳು 44 ರನ್​ಗಳಿಗೆ 2 ವಿಕೆಟ್ ಕಬಳಿಸಿದ್ದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಜೇಮಿ ಸ್ಮಿತ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಪರಿಣಾಮ ಇಂಗ್ಲೆಂಡ್ ಮೊದಲ 100 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತು.

2 / 5
ಆದರೆ ಆ ಬಳಿಕ 31 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡದ ಏಳು ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಕಳಿಸುವಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು ಯಶಸ್ವಿಯಾದರು. ಪರಿಣಾಮ ಇಂಗ್ಲೆಂಡ್ 24.3 ಓವರ್​ಗಳಲ್ಲಿ 131 ರನ್​ಗಳಿಗೆ ಆಲೌಟ್ ಆಯಿತು. ಅಚ್ಚರಿ ಎಂದರೆ ಕಳೆದ 50 ವರ್ಷಗಳಲ್ಲಿ ಲೀಡ್ಸ್​ನಲ್ಲಿ ಇಂಗ್ಲೆಂಡ್ ಕಲೆಹಾಕಿದ ಕನಿಷ್ಠ ಸ್ಕೋರ್.

3 / 5
ಅಂದರೆ 1975 ರಲ್ಲಿ ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ 93 ರನ್​ಗಳಿಗೆ ಆಲೌಟ್ ಆದ ಬಳಿಕ ಇಂಗ್ಲೆಂಡ್ ಈ ಪಿಚ್​ನಲ್ಲಿ ಕಡಿಮೆ ಮೊತ್ತಕ್ಕೆ ಸರ್ವಪತನ ಕಂಡಿರಲಿಲ್ಲ. ಆದರೆ ಸೌತ್ ಆಫ್ರಿಕಾ ತಂಡವು ಆತಿಥೇಯರನ್ನು ಕೇವಲ 131 ರನ್​ಗಳಿಗೆ ಆಲೌಟ್ ಮಾಡಿ 50 ವರ್ಷಗಳ ಬಳಿಕ ಹೀನಾಯ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಈ ಹೀನಾಯ ಸೋಲಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವು 1-0 ಅಂತರದಿಂದ ಹಿನ್ನಡೆ ಅನುಭವಿಸಿದೆ. ಅಲ್ಲದೆ ಈ ಸರಣಿಯ ದ್ವಿತೀಯ ಪಂದ್ಯವು ಗುರುವಾರ ನಡೆಯಲಿದ್ದು, ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಇಂಗ್ಲೆಂಡ್ ತಂಡ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 5
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ