AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 0,0,7 ಮೊದಲ ಪಂದ್ಯದಲ್ಲೇ ಮೂವರು ಆರ್​ಸಿಬಿ ಆಟಗಾರರು ಫೇಲ್

IND vs ENG: ಭಾರತ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಕಳಪೆ ಬ್ಯಾಟಿಂಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆತಂಕ ಉಂಟುಮಾಡಿದೆ. ಆರ್‌ಸಿಬಿ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡಿ ಖರೀದಿಸಿರುವ ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟನ್ ಮತ್ತು ಜೇಕಬ್ ಬೆಥೆಲ್ ಅವರು ನಿರಾಶಾದಾಯಕ ಪ್ರದರ್ಶನ ನೀಡಿದ್ದಾರೆ. ಈ ಆಟಗಾರರ ಕಳಪೆ ಪ್ರದರ್ಶನವು ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಯಶಸ್ಸಿನ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕವಿದೆ.

ಪೃಥ್ವಿಶಂಕರ
|

Updated on: Jan 22, 2025 | 9:30 PM

Share
ಟೀಂ ಇಂಡಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿದೆ. ಈ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡದ ಪರ ನಾಯಕ ಜೋಸ್ ಬಟ್ಲರ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್‌ಮನ್ ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಅರ್ಧಕ್ಕಿಂತ ಹೆಚ್ಚು ತಂಡಕ್ಕೆ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ.

1 / 6
ಇಂಗ್ಲೆಂಡ್‌ನ ಈ ಪ್ರದರ್ಶನ ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟೆನ್ಷನ್ ಹೆಚ್ಚಿಸಿದೆ. ವಾಸ್ತವವಾಗಿ, ಇಂಗ್ಲೆಂಡ್ ಆಡುವ 11 ರ ಬಳಗದಲ್ಲಿ ಸ್ಥಾನ ಪಡೆದಿರುವ ಮೂವರು ಬ್ಯಾಟ್ಸ್‌ಮನ್‌ಗಳು ಮುಂದಿನ ಐಪಿಎಲ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದು, ಈ ಮೂವರ ಮೇಲೆ ಆರ್​ಸಿಬಿ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಆದರೆ ಈ ಮೂವರು ಕೂಡ ಬ್ಯಾಟಿಂಗ್​ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

2 / 6
ವಾಸ್ತವವಾಗಿ ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್​ಸಿಬಿ, ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟನ್ ಮತ್ತು ಜಾಕೋಬ್ ಬೆಥೆಲ್ ಅವರನ್ನು ಕೋಟಿ ಕೋಟಿ ರೂ ನೀಡಿ ಖರೀದಿಸಿದೆ. ಇದರಲ್ಲಿ ಫಿಲ್ ಸಾಲ್ಟ್​ಗೆ 11.50 ಕೋಟಿ ರೂ, ಲಿಯಾಮ್ ಲಿವಿಂಗ್ ಸ್ಟನ್​ಗೆ 8.75 ಕೋಟಿ ರೂ, ಹಾಗೂ ಜೇಕಬ್ ಬೆತೆಲ್ ಗೆ 2.60 ಕೋಟಿ ರೂ. ನೀಡಿದೆ. ಅಂದರೆ ಈ ಮೂವರು ಆಟಗಾರರನ್ನು ಖರೀದಿಸಲು ಆರ್​ಸಿಬಿ 22.85 ಕೋಟಿ ರೂ. ಖರ್ಚು ಮಾಡಿದೆ. ಆದರೆ ಈ ಮೂವರೂ ಆಟಗಾರರು ದಯನೀಯವಾಗಿ ವಿಫಲರಾಗಿದ್ದಾರೆ.

3 / 6
ಈ ಮೂವರ ಮೇಲೆ ಆರ್​ಸಿಬಿ ಇಷ್ಟು ಮೊತ್ತ ಸುರಿಯಲು ಕಾರಣವೂ ಇದ್ದು ಕಳೆದ ಐಪಿಎಲ್ ಸೀಸನ್​ನಲ್ಲಿ ಫಿಲ್ ಸಾಲ್ಟ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು. ಆರಂಭಿಕರಾಗಿ ಸಾಕಷ್ಟು ರನ್ ಗಳಿಸಿದ್ದರು. ಆದರೆ ಈ ಪಂದ್ಯದಲ್ಲಿ ಅವರು ಕೇವಲ 3 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಔಟಾದರು. ಸಾಲ್ಟ್​ರನ್ನು ಅರ್ಷದೀಪ್​ ಸಿಂಗ್ ಮೊದಲ ಓವರ್​ನಲ್ಲೇ ಪೆವಿಲಿಯನ್​ಗಟ್ಟಿದರು.

4 / 6
ಇವರ ನಂತರ ಬಂದ ಲಿಯಾಮ್ ಲಿವಿಂಗ್ಸ್ಟನ್ ಕೂಡ ಸಾಲ್ಟ್​​ರಂತೆ ಯಾವುದೇ ಪ್ರಭಾವ ಬೀರದೆ ಪೆವಿಲಿಯನ್ ಸೇರಿಕೊಂಡರು. ಕೇವಲ 2 ಎಸೆತಗಳನ್ನು ಮಾತ್ರ ಎದುರಿಸಿದ ಲಿವಿಂಗ್ಸ್ಟನ್ ಖಾತೆ ತೆರೆಯದೆ ಪೆವಿಲಿಯನ್‌ಗೆ ಮರಳಿದರು. ವರುಣ್ ಚಕ್ರವರ್ತಿಯ ಗೂಗ್ಲಿ ಎಸೆತವನ್ನು ಎದುರಿಸುವಲ್ಲಿ ವಿಫಲರಾದ ಲಿವಿಂಗ್ಸ್ಟನ್ ಕ್ಲೀನ್ ಬೌಲ್ಡ್ ಆದರು.

5 / 6
ಇದಾದ ಬಳಿಕ ಬಂದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಪ್ರಭಾವಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಬೆಥೆಲ್ ಖಾತೆ ತೆರೆದರಾದರೂ ರನ್ ಗಳಿಸಲು ಪರದಾಡುತ್ತಿರುವುದು ಕಂಡು ಬಂತು. ತಮ್ಮ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ ಬೆಥೆಲ್ 50 ಸ್ಟ್ರೈಕ್ ರೇಟ್‌ನಲ್ಲಿ ಕೇವಲ 7 ರನ್ ಗಳಿಸಲಷ್ಟೇ ಶಕ್ತರಾದರು. ಹೀಗಿರುವಾಗ ಈ ಮೂವರು ಆಟಗಾರರ ಕಳಪೆ ಪ್ರದರ್ಶನ ಆರ್ಸಿಬಿ ತಂಡದ ಟೆನ್ಷನ್ ಹೆಚ್ಚಿಸಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ