AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ 2023 ಮೊದಲ ಪಂದ್ಯಕ್ಕೆ ಕ್ಷಣಗಣನೆ: ಇಂಗ್ಲೆಂಡ್-ನ್ಯೂಝಿಲೆಂಡ್ ಆಟಗಾರರಿಂದ ಭರ್ಜರಿ ಅಭ್ಯಾಸ

England vs New Zealand ICC world Cup 2023: ಏಕದಿನ ವಿಶ್ವಕಪ್​ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಉಭಯ ತಂಡಗಳು ಈ ಹೈವೋಲ್ಟೇಜ್ ಪಂದ್ಯಕ್ಕೆ ಸ್ಟೇಡಿಯಂಗೆ ತಲುಪಿದ್ದು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

Vinay Bhat
|

Updated on: Oct 05, 2023 | 9:00 AM

Share
ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಚಾಲನೆ ಸಿಗಲಿದ್ದು, ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಮತ್ತು ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ.

1 / 7
ಈಗಾಗಲೇ ಉಭಯ ತಂಡಗಳು ಈ ಹೈವೋಲ್ಟೇಜ್ ಪಂದ್ಯಕ್ಕೆ ಸ್ಟೇಡಿಯಂಗೆ ತಲುಪಿದ್ದು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ನ್ಯೂಝಿಲೆಂಡ್ ತಂಡಕ್ಕೆ ಇದೊಂದು ಸೇಡಿನ ಪಂದ್ಯ ಕೂಡ ಹೌದು. ಯಾಕೆಂದರೆ ಐಸಿಸಿ ವಿಶ್ವಕಪ್ 2019 ರ ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿದಿತ್ತು.

2 / 7
ನ್ಯೂಝಿಲೆಂಡ್ ಟೀಮ್​ಗೆ ದೊಡ್ಡ ಹಿನ್ನಡೆ ಎಂದರೆ ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಟಾಮ್ ಲ್ಯಾಥಮ್ ಕಿವೀಸ್ ಪಡೆಯನ್ನು ಮುನ್ನಡೆಸುತ್ತಿದ್ದಾರೆ. ಡೆವೊನ್ ಕಾನ್ವೇ, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್​ರಂತೆ ಅಪಾಯಕಾರಿ ಆಟಗಾರರನ್ನು ಹೊಂದಿದೆ. ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಮಿಚೆಲ್ ಸ್ಯಾಂಟ್ನರ್, ಜಿಮ್ಮಿ ನೀಶಮ್​ರಂತಹ ಮಾರಕ ಬೌಲರ್​ಗಳಿದ್ದಾರೆ.

3 / 7
ಇತ್ತ ಆಂಗ್ಲರ ಪಡೆ ಬಲಿಷ್ಠವಾಗಿದೆ. ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಜೋ ರೂಟ್ ಮತ್ತು ಜೋಸ್ ಬಟ್ಲರ್ ಅವರನ್ನೊಳಗೊಂಡ ಇಂಗ್ಲೆಂಡ್‌ ಆಕ್ರಮಣಕಾರಿ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ಲಿಯಾಮ್ ಲಿವಿಂಗ್​ಸ್ಟೋನ್, ಮೊಯಿನ್ ಅಲಿ ಹಾಗೂ ಸ್ಯಾಮ್​ ಕರನ್​ರಂತಹ ಆಲ್ರೌಂಡರ್ ಕೂಡ ತಂಡದಲ್ಲಿದ್ದಾರೆ. ಮಾರ್ಕ್ ವುಡ್, ಡೇವಿಡ್ ವಿಲ್ಲಿ, ಆದಿಲ್ ರಶೀದ್​ರಂತಹ ಮಾರಕ ಬೌಲರ್​ಗಳಿದ್ದಾರೆ.

4 / 7
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ.

5 / 7
ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್, ಜೋಸ್ ಬಟ್ಲರ್, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

6 / 7
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಜೋ ರೂಟ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ಸ್ಯಾಮ್ ಕರನ್.

7 / 7
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!

ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ