ಪಾಕಿಸ್ತಾನದಲ್ಲಿ ಅಫ್ಘಾನಿಸ್ತಾನಿಯರು ಭಾರತದ ಧ್ವಜ ಹಾರಿಸಿದ್ರಾ?

Updated on: Mar 01, 2025 | 12:53 PM

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿದೆ. ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಿದೆ. ಇದಾಗ್ಯೂ ಪಾಕಿಸ್ತಾನದಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪಂದ್ಯದ ವೇಳೆ ಭಾರತದ ಧ್ವಜ ಹಾರಾಡಿತ್ತು. ಇದೀಗ ಅಫ್ಘಾನಿಸ್ತಾನ್ ಕ್ರಿಕೆಟ್ ಪ್ರೇಮಿಗಳು ಸಹ ಭಾರತದ ಧ್ವಜ ಹಾರಿಸಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಈ ಸುದ್ದಿಯ ಅಸಲಿಯತ್ತೇನು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

1 / 5
ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ್ ಆತಿಥ್ಯವಹಿಸಿದೆ. ಆದರೆ ಪಾಕ್​ನಲ್ಲಿ ಟೂರ್ನಿ ಆಡಲು ಭಾರತ ಹಿಂದೇಟು ಹಾಕಿದ್ದರಿಂದ ಟೀಮ್ ಇಂಡಿಯಾ ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗುತ್ತಿದೆ. ಇದರ ನಡುವೆ ಪಾಕಿಸ್ತಾನ್ ಸ್ಟೇಡಿಯಂನಲ್ಲಿ ಅಭಿಮಾನಿಯೊಬ್ಬ ಭಾರತದ ಧ್ವಜದೊಂದಿಗೆ ಕಾಣಿಸಿಕೊಂಡಿದ್ದರು.

2 / 5
ಹೀಗೆ ಗದ್ದಾಫಿ​ ಸ್ಟೇಡಿಯಂನಲ್ಲಿ ತ್ರಿವರ್ಣ ಧ್ವಜದೊಂದಿಗೆ ಕಾಣಿಸಿಕೊಂಡಿದ್ದ ಯುವಕನನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದರು. ಅಲ್ಲದೆ ಪಂದ್ಯದ ವೇಳೆ ಭಾರತದ ಧ್ವಜವನ್ನು ಹಿಡಿದುಕೊಳ್ಳಲು ಅವಕಾಶ ನೀಡಿರಲಿಲ್ಲ. ಇದರ ನಡುವೆ ಅಫ್ಘಾನಿಸ್ತಾನ್ ಅಭಿಮಾನಿಗಳು ಲಾಹೋರ್​ನಲ್ಲಿ ನಡೆದ ಪಂದ್ಯದ ವೇಳೆ ಭಾರತದ ಪಾತಾಕೆಯನ್ನು ಹಾರಿಸಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.

3 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ್ ನಡುವಣ ಪಂದ್ಯದ ವೇಳೆ ಅಫ್ಘಾನ್ ಕ್ರಿಕೆಟ್ ಪ್ರೇಮಿಗಳು, ಭಾರತ ಮತ್ತು ಅಫ್ಘಾನಿಸ್ತಾನ್ ಧ್ವಜಗಳನ್ನು​ ಒಳಗೊಂಡ ಬ್ಯಾನರ್​ ಪ್ರದರ್ಶಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹರಿಬಿಡಲಾಗಿದೆ.

4 / 5
ಆದರೆ ಈ ಫೋಟೋ 2023ರ ಏಕದಿನ ವಿಶ್ವಕಪ್​ ಪಂದ್ಯದ ವೇಳೆಯ ಚಿತ್ರ. ನವೆಂಬರ್ 7 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಅಫ್ಘಾನಿಸ್ತಾನ್ ಅಭಿಮಾನಿಗಳು ಎರಡು ದೇಶಗಳ ಧ್ವಜವನ್ನು ಒಳಗೊಂಡ ಬ್ಯಾನರ್ ಪ್ರದರ್ಶಿಸಿದ್ದರು. ಇದನ್ನೇ ಈಗ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ.

5 / 5
ಹಾಗೆಯೇ ಇಂಗ್ಲೆಂಡ್ ವಿರುದ್ಧದ ಗೆಲುವಿನ ಬಳಿಕ ಅಫ್ಘಾನಿಸ್ತಾನ್ ತಂಡದವರು ಭಾರತದ ಧ್ವಜ ಪ್ರದರ್ಶಿಸಿದ್ದಾರೆ ಎಂಬ ಮತ್ತೊಂದು ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ಸಹ ಎಡಿಟ್ ಫೋಟೋ ಆಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಎರಡು ಸುದ್ದಿಗಳು ಸಂಪೂರ್ಣ ಫೇಕ್ ನ್ಯೂಸ್.