AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

Faf du Plessis Records: ಫಾಫ್ ಡುಪ್ಲೆಸಿಸ್ ಇತ್ತೀಚೆಗಷ್ಟೇ ಟಿ20 ಕ್ರಿಕೆಟ್​ನಲ್ಲಿ 11 ಸಾವಿರ ರನ್ ಪೂರೈಸಿ ದಾಖಲೆ ಬರೆದಿದ್ದರು. ಇದೀಗ ವಿರಾಟ್ ಕೊಹ್ಲಿಯನ್ನು ಅವರನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 3ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 27, 2025 | 11:25 AM

Share
ಸೌತ್ ಆಫ್ರಿಕಾ ಟಿ20 ಲೀಗ್​ನ 22ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಫಾಫ್ ಡುಪ್ಲೆಸಿಸ್ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ಸನ್​ರೈಸರ್ಸ್ ಈಸ್ಟರ್ನ್ ಕೇಪ್​ ವಿರುದ್ಧದ ಪಂದ್ಯದಲ್ಲಿ ಜೋಬರ್ಗ್ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುವುದರೊಂದಿಗೆ ಫಾಫ್ ಟಿ20 ಕ್ರಿಕೆಟ್​ನಲ್ಲಿ 400 ಮ್ಯಾಚ್​ಗಳನ್ನಾಡಿದ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

1 / 6
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 399 ಪಂದ್ಯಗಳನ್ನಾಡಿದ್ದರೆ, ಫಾಫ್ ಡುಪ್ಲೆಸಿಸ್ ಇದೀಗ 400 ಪಂದ್ಯಗಳ ಗುರಿ ಮುಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಫಾಫ್​ಗೂ ಮುನ್ನ ಡೇವಿಡ್ ಮಿಲ್ಲರ್ (516) ಹಾಗೂ ಇಮ್ರಾನ್ ತಾಹಿರ್ (426) ಮಾತ್ರ ಸೌತ್ ಆಫ್ರಿಕಾ ಪರ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಫಾಫ್ ಡುಪ್ಲೆಸಿಸ್ ಎಂಟ್ರಿ ಕೊಟ್ಟಿದ್ದಾರೆ.

2 / 6
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 400 ಪಂದ್ಯಗಳನ್ನಾಡಿದ ವಿಶ್ವದ 22ನೇ ಆಟಗಾರನೆಂಬ ಕೀರ್ತಿಗೂ ಫಾಫ್ ಡುಪ್ಲೆಸಿಸ್ ಪಾತ್ರರಾಗಿದ್ದಾರೆ. ಸೌತ್ ಆಫ್ರಿಕಾ, ಆರ್​ಸಿಬಿ, ಸಿಎಸ್​ಕೆ, ಜೆಎಸ್​ಕೆ ಸೇರಿದಂತೆ ಹಲವು ತಂಡಗಳ ಪರ ಒಟ್ಟು 400 ಟಿ20 ಪಂದ್ಯಗಳನ್ನಾಡಿರುವ ಫಾಫ್ 11102 ರನ್ ಕಲೆಹಾಕಿದ್ದಾರೆ.

3 / 6
ಈ 11102 ರನ್​​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಸೌತ್ ಆಫ್ರಿಕಾದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ಮಿಲ್ಲರ್. ಟಿ20 ಕ್ರಿಕೆಟ್​ನಲ್ಲಿ 516 ಪಂದ್ಯಗಳನ್ನಾಡಿರುವ ಮಿಲ್ಲರ್ ಒಟ್ಟು 11139 ರನ್​ ಕಲೆಹಾಕಿದ್ದಾರೆ.

4 / 6
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 399 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 382 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 9 ಶತಕ ಹಾಗೂ 97 ಅರ್ಧಶತಕಗಳೊಂದಿಗೆ ಒಟ್ಟು 12886 ರನ್ ಕಲೆಹಾಕಿದ್ದಾರೆ. ಅಂದರೆ ಇಲ್ಲಿ ಫಾಫ್ ಡುಪ್ಲೆಸಿಸ್ ಪಂದ್ಯಗಳ ಸಂಖ್ಯೆಯಲ್ಲಿ ಮುಂದಿದ್ದರೆ, ವಿರಾಟ್ ಕೊಹ್ಲಿ ರನ್​ಗಳಿಕೆ ಮುಂದಿದ್ದಾರೆ ಎಂಬುದು ವಿಶೇಷ.

5 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಟ್ರಿನಿಡಾಡ್ ನೈಟ್ ರೈಡರ್ಸ್ ಸೇರಿದಂತೆ ವಿಶ್ವದ ಹಲವು ತಂಡಗಳ ಪರ ಪೊಲಾರ್ಡ್​ ಒಟ್ಟು 694 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಟಿ20 ಇತಿಹಾಸದಲ್ಲೇ ಅತ್ಯಧಿಕ ಮ್ಯಾಚ್​ಗಳನ್ನಾಡಿದ ವಿಶ್ವ ದಾಖಲೆ ಬರೆದಿದ್ದಾರೆ.

6 / 6

Published On - 11:23 am, Mon, 27 January 25

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ