AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿ ಫಾಫ್ ಡುಪ್ಲೆಸಿಸ್ ವಿಶ್ವಕಪ್​ ಭವಿಷ್ಯ ನಿರ್ಧಾರ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ಈ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಪರ ಫಾಫ್ ಡುಪ್ಲೆಸಿಸ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ರಾಷ್ಟ್ರೀಯ ತಂಡಕ್ಕೆ ಮರಳಲು ಫಾಫ್ ಬಯಸಿದ್ದು, ಅದರಂತೆ ಟಿ20 ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವ ಇರಾದೆಯಲ್ಲಿದ್ದಾರೆ.

TV9 Web
| Edited By: |

Updated on: Feb 20, 2024 | 10:53 AM

Share
ಡಿಸೆಂಬರ್ 1, 2020 ರ ಬಳಿಕ ಫಾಫ್ ಡುಪ್ಲೆಸಿಸ್ (Faf du Plessis) ಸೌತ್ ಆಫ್ರಿಕಾ ಪರ ಯಾವುದೇ ಟಿ20 ಪಂದ್ಯವಾಡಿಲ್ಲ. ಕಳೆದ 2 ಟಿ20 ವಿಶ್ವಕಪ್​ನಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಫಾಫ್ ಡುಪ್ಲೆಸಿಸ್​​ಗೆ ಕಂಬ್ಯಾಕ್ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್​ ರಹದಾರಿ ಒದಗಿಸಿದೆ. ಅದು ಕೂಡ ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಮುಂಬರುವ ಟಿ20 ವಿಶ್ವಕಪ್​ಗಾಗಿ ಫಾಫ್ ಡುಪ್ಲೆಸಿಸ್ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಸೌತ್ ಆಫ್ರಿಕಾ ತಂಡದ ಕೋಚ್ ರಾಬ್ ವಾಲ್ಟರ್ ತಿಳಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಫಾಫ್ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಅವರು ಮುಂದಿನ ವಿಶ್ವಕಪ್​ಗೆ ಪರಿಗಣನೆಯಲ್ಲಿದ್ದಾರೆ ಎಂದು ವಾಲ್ಟರ್ ಹೇಳಿದ್ದಾರೆ.

2 / 6
ಇತ್ತ ಫಾಫ್ ಡುಪ್ಲೆಸಿಸ್ ಕೂಡ ರಾಷ್ಟ್ರೀಯ ತಂಡದಲ್ಲಿ ಕೊನೆಯ ಬಾರಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಆದರೆ ಅವರ ಕಂಬ್ಯಾಕ್ ಅಂದುಕೊಂಡಷ್ಟು ಸುಲಭವಲ್ಲ. ಏಕೆಂದರೆ ಈಗಾಗಲೇ ಸೌತ್ ಆಫ್ರಿಕಾ ಟಿ20 ತಂಡದಲ್ಲಿ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಫಾಫ್​ಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯಲು ಇರುವ ಏಕೈಕ ದಾರಿ ಐಪಿಎಲ್​.

3 / 6
ಅಂದರೆ ಮುಂಬರುವ ಐಪಿಎಲ್​ನಲ್ಲಿ ಆರ್​ಸಿಬಿ ಪರ ಭರ್ಜರಿ ಪ್ರದರ್ಶನ ನೀಡಿದರೆ ಫಾಫ್ ಡುಪ್ಲೆಸಿಸ್ ಅವರಿಗೆ ಟಿ20 ತಂಡದ ಬಾಗಿಲು ತೆರೆಯಲಿದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ಅನುಭವಿ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡಲು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.

4 / 6
ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಫಾಫ್ ಡುಪ್ಲೆಸಿಸ್ ಅವರ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ. ಪ್ರಸ್ತುತ ಆರ್​ಸಿಬಿ ತಂಡದ ನಾಯಕರಾಗಿರುವ ಡುಪ್ಲೆಸಿಸ್ ಇತ್ತೀಚೆಗೆ ಮುಕ್ತಾಯಗೊಂಡ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

5 / 6
ಅದರಲ್ಲೂ ಕಳೆದ ಸೀಸನ್ ಐಪಿಎಲ್​ನಲ್ಲಿ 14 ಪಂದ್ಯಗಳಿಂದ ಒಟ್ಟು 730 ರನ್​ ಕಲೆಹಾಕಿದ್ದರು. ಅದರಂತೆ ಈ ಬಾರಿ ಕೂಡ ಆರ್​ಸಿಬಿ ಪರ ಅಬ್ಬರಿಸಿದರೆ ಫಾಫ್ ಡುಪ್ಲೆಸಿಸ್​ಗೆ ಸೌತ್ ಆಫ್ರಿಕಾ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎಂದೇ ಹೇಳಬಹುದು.

6 / 6
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ