Faf Duplessis: ಹೈದರಾಬಾದ್ ವಿರುದ್ಧದ ಗೆಲುವಿನ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದೇನು ನೋಡಿ

|

Updated on: May 19, 2023 | 9:17 AM

SRH vs RCB, IPL 2023: ವಿರಾಟ್ ಕೊಹ್ಲಿ ನಾಲ್ಕು ವರ್ಷಗಳ ಬಳಿಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ಹೈದರಾಬಾದ್ ವಿರುದ್ಧದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಖುಷಿ ಹಂಚಿಕೊಂಡಿದ್ದಾರೆ.

1 / 7
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುರುವಾರ ನಡೆದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಪಂದ್ಯ ರೋಚಕತೆಯಿಂದ ಕೂಡಿತ್ತು. ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಅಮೋಘ ಗೆಲುವು ಕಂಡಿತು.

2 / 7
ವಿರಾಟ್ ಕೊಹ್ಲಿ ನಾಲ್ಕು ವರ್ಷಗಳ ಬಳಿಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಜೊತೆಗೆ ಐಪಿಎಲ್ 2023 ರಲ್ಲಿ ಆರ್​ಸಿಬಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ.

3 / 7
ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಖುಷಿ ಹಂಚಿಕೊಂಡಿದ್ದಾರೆ. ನಾವು ಗುರಿ ಬೆನ್ನಟ್ಟಿದ್ದು ಅದ್ಭುತವಾಗಿತ್ತು. ಇದುವೇ ನನ್ನ ಮೊದಲ ಪ್ರತಿಕ್ರಿಯೆ. ಮೊದಲ ಇನ್ನಿಂಗ್ಸ್ ಮುಗಿಸಿದಾಗ ತಿಳಿಯಿತು ಇದೊಂದು ಅತ್ಯುತ್ತಮ ವಿಕೆಟ್ ಎಂಬುದು ಎಂದು ಹೇಳಿದ್ದಾರೆ.

4 / 7
200 ರನ್ ಇಲ್ಲಿ ಸುಲಭವಾಗಿ ಕಲೆಹಾಕಬಹುದು. ಸ್ಪಿನ್ನರ್​ಗಳಿಗೆ ಹೆಚ್ಚು ಬಾಲ್ ಅನ್ನು ಟರ್ನ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬ್ಯಾಟಿಂಗ್ ದೃಷ್ಟಿಕೋನದಿಂದ ನಾವು ಸರಿಯಾದ ಕೆಲಸಗಳನ್ನು ಮಾಡುತ್ತಿದ್ದೇವೆ. ಹಿಂದಿನ ಪಂದ್ಯದಲ್ಲೂ ನಮ್ಮ ಬೌಲಿಂಗ್ ಅದ್ಭುತವಾಗಿತ್ತು - ಫಾಫ್ ಡುಪ್ಲೆಸಿಸ್.

5 / 7
ನಾನು ಮತ್ತು ಕೊಹ್ಲಿ ಪರಸ್ಪರ ಚೆನ್ನಾಗಿ ಮಾತನಾಡಿಕೊಳ್ಳುತ್ತೇವೆ. ನಾವಿಬ್ಬರು ಬೇರೆ ಬೇರೆ ಜಾಗದಲ್ಲಿ ಹೊಡೆತಗಳನ್ನು ಹೊಡೆಯುವುದರಿಂದ ಬೌಲರ್​ಗೆ ಬೌಲಿಂಗ್ ಮಾಡಲು ಕಷ್ಟವಾಗುತ್ತದೆ. ನನ್ನ ಮತ್ತು ಕೊಹ್ಲಿ ಮಧ್ಯೆ ಆನ್​ಫೀಲ್ಡ್ ಮತ್ತು ಆಫ್ ಫೀಲ್ಡ್​ನಲ್ಲಿ ಉತ್ತಮ ಬಾಂಧವ್ಯವಿದೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

6 / 7
ಮುಂದಿನ ಪಂದ್ಯ ಚಿನ್ನಸ್ವಾಮಿಯಲ್ಲಿ ಆಡಲಿದ್ದೇವೆ. ಅದು ಅದ್ಭುತ ಪಂದ್ಯ ಆಗಲಿದೆ. ಅಲ್ಲಿ ಸಾಕಷ್ಟು ಅಭಿಮಾನಿಗಳಿರುತ್ತಾರೆ. ಅದುಕೂಡ ನಮಗೆ ಗೆಲ್ಲಲೇ ಬೇಕಾದ ಪಂದ್ಯ. ಇಂದು ನಾವು ನೀಡಿದ ಪ್ರದರ್ಶನ ಖುಷಿ ನೀಡಿದೆ ಎಂಬುದು ಫಾಫ್ ಡುಪ್ಲೆಸಿಸ್ ಮಾತು.

7 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್​ರೈಸರ್ಸ್ ಹೆನ್ರಿಚ್ ಕ್ಲಾಸೆನ್ ಅವರ 104 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ 19.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 187 ರನ್ ಸಿಡಿಸಿ ಜಯ ಸಾಧಿಸಿತು. ವಿರಾಟ್ ಕೊಹ್ಲಿ 100 ರನ್ ಚಚ್ಚಿದರೆ ಡುಪ್ಲೆಸಿಸ್ 71 ರನ್ ಸಿಡಿಸಿದರು.