ಸಿಕ್ಸ್​ಗಳ ಸುರಿಮಳೆ: ಸ್ಪೋಟಕ ಸೆಂಚುರಿ ಸಿಡಿಸಿ ದಾಖಲೆ ಬರೆದ ಫಖರ್ ಝಮಾನ್

| Updated By: ಝಾಹಿರ್ ಯೂಸುಫ್

Updated on: Nov 04, 2023 | 7:28 PM

Fakhar Zaman Records: ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಖರ್ ಝಮಾನ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 63 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

1 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಪಾಕ್ ತಂಡದ ಆರಂಭಿಕ ಆಟಗಾರ ಫಖರ್ ಝಮಾನ್.

2 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 401 ರನ್​ ಕಲೆಹಾಕಿತು. 402 ರನ್​ಗಳ ಬೃಹತ್ ಗುರಿ ಪಡೆದ ಪಾಕಿಸ್ತಾನ್ ತಂಡಕ್ಕೆ ಫಖರ್ ಝಮಾನ್ ಸ್ಪೋಟಕ ಆರಂಭ ಒದಗಿಸಿದ್ದರು.

3 / 7
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಫಖರ್ ಝಮಾನ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 63 ಎಸೆತಗಳಲ್ಲಿ ಶತಕ ಪೂರೈಸಿ ಬ್ಯಾಟ್ ಮೇಲೆಕ್ಕೆತ್ತಿದರು.

4 / 7
ಈ ಸ್ಪೋಟಕ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಪರ ಅತೀ ವೇಗದ ಶತಕ ಸಿಡಿಸಿದ ದಾಖಲೆ ಫಖರ್ ಝಮಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸಲೀಮ್ ಮಲಿಕ್ ಹೆಸರಿನಲ್ಲಿತ್ತು. 1987ರ ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ 94 ಎಸೆತಗಳಲ್ಲಿ ಸಲೀಮ್ ಮಲಿಕ್ ಶತಕ ಸಿಡಿಸಿ ದಾಖಲೆ ಬರೆದಿದ್ದರು.

5 / 7
ಇದೀಗ ಕೇವಲ 63 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಫಖರ್ ಝಮಾನ್ ಹೊಸ ದಾಖಲೆ ಬರೆದಿದ್ದಾರೆ. ಇದಲ್ಲದೆ ಏಕದಿನ ವಿಶ್ವಕಪ್​ನಲ್ಲಿ ಪಾಕ್​ ಪರ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

6 / 7
ಇದಕ್ಕೂ ಮುನ್ನ ಈ ದಾಖಲೆ ಇಮ್ರಾನ್ ನಝೀರ್ ಹೆಸರಿನಲ್ಲಿತ್ತು. 2007ರ ವಿಶ್ವಕಪ್​ನಲ್ಲಿ ಝಿಂಬಾಬ್ವೆ ವಿರುದ್ಧ ಇಮ್ರಾನ್ ನಝೀರ್ 8 ಸಿಕ್ಸ್ ಬಾರಿಸಿದ್ದರು. ಇದೀಗ ಫಖರ್ ಝಮಾನ್ 11 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

7 / 7
ಇನ್ನು ಈ ಪಂದ್ಯದಲ್ಲಿ 81 ಎಸೆತಗಳಲ್ಲಿ ಫಖರ್ ಝಮಾನ್ 11 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 126 ರನ್ ಬಾರಿಸಿದ್ದರು. ಪರಿಣಾಮ ಪಾಕಿಸ್ತಾನ್ ತಂಡವು 25.3 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಅಲ್ಲದೆ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಅದರಂತೆ ಈ ಪಂದ್ಯವನ್ನು ಪಾಕಿಸ್ತಾನ್ ತಂಡವು 21 ರನ್​ಗಳಿಂದ ಗೆದ್ದುಕೊಂಡಿದೆ.