AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Teams 2023: ಐಸಿಸಿ ವರ್ಷದ ತಂಡಗಳಲ್ಲಿ ಒಬ್ಬನೇ ಒಬ್ಬ ಪಾಕ್ ಆಟಗಾರನಿಲ್ಲ! ಗೇಲಿ ಮಾಡಿದ ನೆಟ್ಟಿಗರು

ICC Teams 2023: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಂಗಳವಾರ ಮೂರು ಮಾದರಿಯ ಕ್ರಿಕೆಟ್​ನ ವರ್ಷದ ತಂಡಗಳನ್ನು ಪ್ರಕಟಿಸಿದೆ. ಐಸಿಸಿ ಪ್ರಕಟಿಸಿರುವ ವಾರ್ಷಿಕ ತಂಡದಲ್ಲಿ ಒಬ್ಬನೇ ಒಬ್ಬ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರ ಸ್ಥಾನ ಪಡೆದಿಲ್ಲ. ಇದನ್ನು ಗಮನಿಸಿದ ನೆಟ್ಟಿಗರು ಪಾಕ್ ಆಟಗಾರರ ಕಾಲೆಳೆಯಲು ಆರಂಭಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 24, 2024 | 3:34 PM

Share
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮಂಗಳವಾರ ಮೂರು ಮಾದರಿಯ ಕ್ರಿಕೆಟ್​ನ ವರ್ಷದ ತಂಡಗಳನ್ನು ಪ್ರಕಟಿಸಿದೆ. ಐಸಿಸಿ ಪ್ರಕಟಿಸಿರುವ ವಾರ್ಷಿಕ ತಂಡದಲ್ಲಿ ಒಬ್ಬನೇ ಒಬ್ಬ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರ ಸ್ಥಾನ ಪಡೆದಿಲ್ಲ. ಇದನ್ನು ಗಮನಿಸಿದ ನೆಟ್ಟಿಗರು ಪಾಕ್ ಆಟಗಾರರ ಕಾಲೆಳೆಯಲು ಆರಂಭಿಸಿದ್ದಾರೆ.

1 / 7
ವಾಸ್ತವವಾಗಿ ಈ ವರ್ಷ ನಡೆದ ಏಷ್ಯಾಕಪ್, ಏಕದಿನ ವಿಶ್ವಕಪ್ ಸೇರಿದಂತೆ ಪ್ರಮುಖ ಈವೆಂಟ್​ಗಳ ಪಾಕ್ ತಂಡ ಸಪ್ಪೆ ಪ್ರದರ್ಶನ ನೀಡಿದೆ. ಹಾಗೆಯೇ ವಿಶ್ವಕಪ್ ಮುಗಿದ ಬಳಿಕ ಆಡಿದ ಎರಡೂ ಸರಣಿಗಳಲ್ಲೂ ಪಾಕ್ ತಂಡ ಹೀನಾಯ ಸೋಲನುಭವಿಸಿದೆ.

2 / 7
ಪಾಕಿಸ್ತಾನ ತಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 3-0 ಮತ್ತು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 4-1 ಅಂತರದ ಸೋಲನ್ನು ಎದುರಿಸಬೇಕಾಯಿತು. ಇದರಿಂದಾಗಿ ಐಸಿಸಿ ತಂಡದಲ್ಲಿ ಪಾಕಿಸ್ತಾನದ ಯಾವೊಬ್ಬ ಆಟಗಾರನೂ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

3 / 7
2023 ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಅಷ್ಟು ಉತ್ತಮವಾಗಿರಲಿಲ್ಲ. ಈ ವರ್ಷ ಆಡಿದ ಬಹುತೇಕ ಸರಣಿಗಳಲ್ಲಿ ತಂಡ ಸೋಲು ಕಂಡಿದೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಕೂಡ ಪಾಕಿಸ್ತಾನ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಇದಾದ ನಂತರ ಬಾಬರ್ ಆಝಂ ನಾಯಕತ್ವವನ್ನೂ ಕಳೆದುಕೊಂಡರು.

4 / 7
ಈಗ 2024 ರ ಆರಂಭವು ಪಾಕಿಸ್ತಾನ ತಂಡಕ್ಕೆ ತುಂಬಾ ಕೆಟ್ಟದಾಗಿದೆ. ಹೊಸ ವರ್ಷದ ಆರಂಭದಲ್ಲಿ ಪಾಕಿಸ್ತಾನ ತಂಡ ಇದುವರೆಗೆ ಆಡಿದ ಎರಡು ಸರಣಿಗಳನ್ನು ಕಳೆದುಕೊಂಡಿದೆ. ಇದೀಗ ಐಸಿಸಿ ತಂಡದಲ್ಲಿ ಪಾಕಿಸ್ತಾನದ ಯಾವೊಬ್ಬ ಆಟಗಾರನೂ ಸ್ಥಾನ ಪಡೆಯದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ತಂಡವನ್ನು ಗೇಲಿ ಮಾಡಲಾಗುತ್ತಿದೆ.

5 / 7
ಇತ್ತೀಚೆಗಷ್ಟೇ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಿತ್ತು. ಈ ಸರಣಿಯಲ್ಲಿ ಪಾಕಿಸ್ತಾನ ತಂಡ ಸತತ 4 ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ಪಾಕಿಸ್ತಾನ ತಂಡ ಕೊನೆಯ ಪಂದ್ಯವನ್ನಷ್ಟೇ ಗೆಲ್ಲಲು ಶಕ್ತವಾಗಿತ್ತು. ಇದರಿಂದಾಗಿ ಪಾಕಿಸ್ತಾನ ತಂಡ 4-1 ಅಂತರದಲ್ಲಿ ಸರಣಿಯಲ್ಲಿ ಸೋಲು ಅನುಭವಿಸಬೇಕಾಯಿತು.

6 / 7
ಇದೆಲ್ಲದರ ನಡುವೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಕೋಲಾಹಲ ಎದ್ದಿದ್ದು, ಮಂಡಳಿಯ ಹಾಲಿ ಮುಖ್ಯಸ್ಥ ಝಾಕಾ ಅಶ್ರಫ್ ತಂಡದ ಕಳಪೆ ಪ್ರದರ್ಶನಕ್ಕೆ ಬೇಸತ್ತು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗೆಯೇ ಪ್ರಮುಖ ಮೂವರು ಕೋಚ್​ಗಳು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ