Updated on: Jul 24, 2023 | 10:58 PM
ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದರು.
ಹಿಟ್ಮ್ಯಾನ್ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಇಶಾನ್ ಕಿಶನ್ 33 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಇದಾಗ್ಯೂ ಟೀಮ್ ಇಂಡಿಯಾ ಪರ ಅತೀ ವೇಗದ ಟೆಸ್ಟ್ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ಹಾಗೆಯೇ ಉಳಿದಿದೆ.
ಹಾಗಿದ್ರೆ ಭಾರತದ ಪರ ಟೆಸ್ಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬ್ಯಾಟರ್ಗಳು ಯಾರೆಲ್ಲಾ ಎಂದು ನೋಡೋಣ...
1- ರಿಷಭ್ ಪಂತ್: 2022 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.
2- ಕಪಿಲ್ ದೇವ್: 1982 ರಲ್ಲಿ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ಕೇವಲ 30 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು.
3- ಶಾರ್ದೂಲ್ ಠಾಕೂರ್: 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಶಾರ್ದೂಲ್ ಠಾಕೂರ್ 31 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.
4- ವೀರೇಂದ್ರ ಸೆಹ್ವಾಗ್: 2008 ರಲ್ಲಿ ಇಂಗ್ಲೆಂಡ್ ವಿರುದ್ಧ ಸೆಹ್ವಾಗ್ ಕೇವಲ 32 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು.
5- ಇಶಾನ್ ಕಿಶನ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಇಶಾನ್ ಕಿಶನ್ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.