ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್

Updated on: Feb 11, 2026 | 8:30 AM

Finn Allen Record: ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ ಅಬ್ಬರ ಶುರುವಾಗಿದೆ. ಈ ಅಬ್ಬರದೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಫಿನ್ ಅಲೆನ್ ಈ ವಿಶ್ವ ದಾಖಲೆಯನ್ನು ಬರೆದಿರುವುದು ಕೇವಲ 2854 ಎಸೆತಗಳಲ್ಲಿ ಎಂಬುದು ವಿಶೇಷ.

1 / 5
ಟಿ೨೦ ಕ್ರಿಕೆಟ್‌ನಲ್ಲಿ ನ್ಯೂಝಿಲೆಂಡ್ ತಂಡದ ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 2854 ಎಸೆತಗಳಲ್ಲಿ. ಈ ಎಸೆತಗಳ ಮೂಲಕ ಅಲೆನ್ ಟೀಮ್ ಇಂಡಿಯಾದ ಅಭಿಷೇಕ್ ಶರ್ಮಾರ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

2 / 5
ಚೆನ್ನೈನಲ್ಲಿ ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ನ್ಯೂಝಿಲೆಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಫಿನ್ ಅಲೆನ್ 50 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 84 ರನ್ ಚಚ್ಚಿದ್ದರು. ಈ 84 ರನ್ ಗಳೊಂದಿಗೆ ಅಲೆನ್ ಟಿ20 ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ್ದಾರೆ.

3 / 5
ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಫಿನ್ ಅಲೆನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ರೆಕಾರ್ಡ್ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು.

4 / 5
ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಸಂಚಲನ ಸೃಷ್ಟಿಸಿರುವ ಅಭಿಷೇಕ್ ಶರ್ಮಾ 2898 ಎಸೆತಗಳಲ್ಲಿ 5000 ರನ್ ಪೂರೈಸಿದ್ದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 5 ಸಾವಿರ ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

5 / 5
ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ.