AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR ಪರ ಇಂತಹದೊಂದು ಶತಕ ಯಾರೂ ಬಾರಿಸಿಲ್ಲ..!

Finn Allen Record: ಐಪಿಎಲ್ ಇತಿಹಾಸದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಒಂದು ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದರೂ, ಶತಕಗಳ ವಿಷಯದಲ್ಲಿ ಈ ತಂಡಕ್ಕೆ ದೀರ್ಘಕಾಲದ ಬರವಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಕೆಆರ್ ಬ್ಯಾಟರ್‌ಗಳು ಮೈದಾನದಲ್ಲಿ ಅಬ್ಬರಿಸುತ್ತಿದ್ದು, ದಾಖಲೆಗಳನ್ನು ಪುಡಿಪುಡಿ ಮಾಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ 2026ರಲ್ಲಿ ಫಿನ್ ಅಲೆನ್ ಸಿಡಿಸಿದ ಚಾರಿತ್ರಿಕ ಶತಕವು ಕೆಕೆಆರ್ ಪಾಲಿಗೆ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ.

ಝಾಹಿರ್ ಯೂಸುಫ್
|

Updated on: May 09, 2026 | 9:52 AM

Share
Finn (4)ಕೊಲ್ಕತ್ತಾ ನೈಟ್ ರೈಡರ್ಸ್ ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೊಸ ಇತಿಹಾಸ ಬರೆದಿದ್ದು ಮತ್ಯಾರೂ ಅಲ್ಲ, ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen). ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಅಲೆನ್ ಕೆಕೆಆರ್ ಪರ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. (PC: IPL)

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೊಸ ಇತಿಹಾಸ ಬರೆದಿದ್ದು ಮತ್ಯಾರೂ ಅಲ್ಲ, ಸ್ಫೋಟಕ ದಾಂಡಿಗ ಫಿನ್ ಅಲೆನ್ (Finn Allen). ಅದು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ. ಈ ಶತಕದೊಂದಿಗೆ ಅಲೆನ್ ಕೆಕೆಆರ್ ಪರ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. (PC: IPL)

1 / 6
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್ ಪರ ಆರಂಭಿಕನಾಗಿ ಕಣಕ್ಕಿಳಿದ ಫಿನ್ ಅಲೆನ್ 47 ಎಸೆತಗಳಲ್ಲಿ 10 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೋಂದಿಗೆ ಅಜೇಯ 100 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಕೆಕೆಆರ್ ಪರ ಚೇಸಿಂಗ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ದಾಂಡಿಗ ಎನಿಸಿಕೊಂಡರು. (PC: IPL)

2 / 6
ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಐಪಿಎಲ್​ನಲ್ಲಿ ಒಟ್ಟು ನಾಲ್ವರು ಬ್ಯಾಟರ್​ಗಳು ಶತಕ ಸಿಡಿಸಿದ್ದಾರೆ. ಮೊದಲಿಗೆ ಬ್ರೆಂಡನ್ ಮೆಕಲಂ (2008) ಶತಕ ಸಿಡಿಸಿದರೆ, ಆ ಬಳಿಕ ವೆಂಕಟೇಶ್ ಅಯ್ಯರ್ (2023) ಸೆಂಚುರಿ ಬಾರಿಸಿದ್ದರು. ಇದಾದ ಬಳಿಕ ಸುನಿಲ್ ನರೈನ್ (2024) ಶತಕ ಚಚ್ಚಿದ್ದರು. (PC: IPL)

3 / 6
ಈ ಮೂರು ಶತಕಗಳು ಮೂಡಿಬಂದಿರುವುದು ಮೊದಲ ಇನಿಂಗ್ಸ್​ನಲ್ಲಿ. ಅಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೊದಲು ಬ್ಯಾಟ್ ಮಾಡಿದಾಗ ಮೆಕಲಂ, ವೆಂಕಟೇಶ್ ಅಯ್ಯರ್ ಹಾಗೂ ಸುನಿಲ್ ನರೈನ್ ಶತಕದ ಅಬ್ಬರ ತೋರಿಸಿದ್ದರು. ಆದರೆ ಚೇಸಿಂಗ್​ನಲ್ಲಿ ಸೆಂಚುರಿ ಸಿಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ. (PC: IPL)

4 / 6
ಇದೀಗ 18 ವರ್ಷಗಳ ಇತಿಹಾಸ ಬದಲಿಸುವಲ್ಲಿ ಫಿನ್ ಅಲೆನ್ ಯಶಸ್ವಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಚೇಸಿಂಗ್​ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 6
ಅಷ್ಟೇ ಅಲ್ಲದೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಅತೀ ವೇಗದ ಸೆಂಚುರಿ ಸಿಡಿಸಿದ ದಾಖಲೆಯನ್ನೂ ಕೂಡ ಫಿನ್ ಅಲೆನ್ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಂಕಟೇಶ್ ಅಯ್ಯರ್ ಹಾಗೂ ಸುನಿಲ್ ನರೈನ್ ಹೆಸರಿನಲ್ಲಿತ್ತು. ಇಬ್ಬರು 49 ಎಸೆತಗಳಲ್ಲಿ ಸೆಂಚುರಿ ಬಾರಿಸಿದ್ದರು. ಇದೀಗ 47 ಎಸೆತಗಳ ಮೂಲಕ ಶತಕ ಸಿಡಿಸಿ ಫಿನ್ ಅಲೆನ್ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. (PC: IPL)

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ