ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ

Updated on: Jan 21, 2026 | 8:24 AM

Finn Allen Record: ಬಿಗ್ ಬ್ಯಾಷ್ ಲೀಗ್‌ನಲ್ಲಿ ಫಿನ್ ಅಲೆನ್ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಕಿವೀಸ್ ದಾಂಡಿಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮತ್ತೋರ್ವ ಸ್ಫೋಟಕ ದಾಂಡಿಗ ಮಿಚೆಲ್ ಓವನ್ ಅವರ ದಾಖಲೆಯನ್ನು ಮುರಿಯುವ ಮೂಲಕ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ....

1 / 5
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ (BBL 15) ನ್ಯೂಝಿಲೆಂಡ್ ಬ್ಯಾಟರ್ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಸಿಕ್ಸರ್ ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ.

2 / 5

ಬಿಗ್ ಬ್ಯಾಷ್ ಲೀಗ್‌ನ ಸೀಸನ್ 15 ರ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ವಿರುದ್ಧ ಪರ್ತ್ ಸ್ಕಾಚರ್ಸ್ ಪರ ಕಣಕ್ಕಿಳಿದ ಫಿನ್ ಅಲೆನ್ 30 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 2 ಫೋರ್ ಗಳೊಂದಿಗೆ 49 ರನ್ ಕಲೆಹಾಕಿದ್ದರು. ಈ ನಾಲ್ಕು ಸಿಕ್ಸರ್ ಗಳೊಂದಿಗೆ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5

ಈ ಬಾರಿಯ ಬಿಗ್ ಬ್ಯಾಷ್ ಲೀಗ್‌ನಲ್ಲಿ 10 ಇನಿಂಗ್ಸ್ ಆಡಿರುವ ಫಿನ್ ಅಲೆನ್ ಈವರೆಗೆ ಬರೋಬ್ಬರಿ 37 ಸಿಕ್ಸರ್ ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ಇತಿಹಾಸದಲ್ಲೇ ಸೀಸನ್ ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಮಿಚೆಲ್ ಓವನ್ ಹೆಸರಿನಲ್ಲಿತ್ತು. 2024-25 ರ ಬಿಗ್ ಬ್ಯಾಷ್ ಲೀಗ್ ಸೀಸನ್ ನಲ್ಲಿ ಬರೋಬ್ಬರಿ 36 ಸಿಕ್ಸರ್ ಸಿಡಿಸಿ ಮಿಚೆಲ್ ಓವನ್ ಈ ದಾಖಲೆ ನಿರ್ಮಿಸಿದ್ದರು.

5 / 5

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಅಳಿಸಿ ಹಾಕಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಸಿಕ್ಸರ್ ಗಳ ಸುರಿಮಳೆಗೈದಿರುವ ಅಲೆನ್ ಒಟ್ಟು 37 ಸಿಕ್ಸ್ ಸಿಡಿಸಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us