Finn Allen: ಅಲೆನ್ ಅಬ್ಬರಕ್ಕೆ ಹಳೆಯ ದಾಖಲೆಗಳು ಉಡೀಸ್
TV9 Web | Updated By: ಝಾಹಿರ್ ಯೂಸುಫ್
Updated on:
Jan 17, 2024 | 11:24 AM
Finn Allen Records: ಆರಂಭಿಕನಾಗಿ ಕಣಕ್ಕಿಳಿದ ಫಿನ್ ಅಲೆನ್ ಕೇವಲ 62 ಎಸೆತಗಳಲ್ಲಿ 16 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 137 ರನ್ ಬಾರಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ನ್ಯೂಝಿಲೆಂಡ್ ಪರ ಅತ್ಯಧಿಕ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅಲೆನ್ ಪಾತ್ರರಾದರು.
1 / 7
ಪಾಕಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ನ್ಯೂಝಿಲೆಂಡ್ ಆಟಗಾರ ಫಿನ್ ಅಲೆನ್ (Finn Allen) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.
2 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಫಿನ್ ಅಲೆನ್ ಕೇವಲ 62 ಎಸೆತಗಳಲ್ಲಿ 16 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 137 ರನ್ ಬಾರಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ನ್ಯೂಝಿಲೆಂಡ್ ಪರ ಅತ್ಯಧಿಕ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅಲೆನ್ ಪಾತ್ರರಾದರು.
3 / 7
ಇದಕ್ಕೂ ಮುನ್ನ ಈ ದಾಖಲೆ ಬ್ರೆಂಡನ್ ಮೆಕಲಂ ಹೆಸರಿನಲ್ಲಿತ್ತು. 2012 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಮೆಕಲಂ 72 ಎಸೆತಗಳಲ್ಲಿ 123 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದೀಗ 137 ರನ್ ಬಾರಿಸುವ ಮೂಲಕ ಫಿನ್ ಅಲೆನ್ ಈ ದಾಖಲೆಯನ್ನು ಮುರಿದಿದ್ದಾರೆ.
4 / 7
ಹಾಗೆಯೇ ಈ ಪಂದ್ಯದಲ್ಲಿ ಫಿನ್ ಅಲೆನ್ 16 ಸಿಕ್ಸ್ಗಳನ್ನು ಸಿಡಿಸಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನ ಇನಿಂಗ್ಸ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದ್ದಾರೆ.
5 / 7
ಈ ಹಿಂದೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಅಫ್ಘಾನಿಸ್ತಾದ ಆರಂಭಿಕ ಆಟಗಾರ ಹಝರುತುಲ್ಲಾ ಝಝೈ ಹೆಸರಿನಲ್ಲಿತ್ತು. 2019 ರಲ್ಲಿ ಐರ್ಲೆಂಡ್ ವಿರುದ್ಧ ಝಝೈ ಒಟ್ಟು 16 ಸಿಕ್ಸ್ಗಳನ್ನು ಸಿಡಿಸಿದ್ದರು. ಇದೀಗ ಫಿನ್ ಅಲೆನ್ ಕೂಡ 16 ಸಿಕ್ಸ್ ಬಾರಿಸಿ ಈ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ದಾಖಲೆ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
6 / 7
ಇದಲ್ಲದೆ ನ್ಯೂಝಿಲೆಂಡ್ ಪರ ಟಿ20 ಕ್ರಿಕೆಟ್ನಲ್ಲಿ 15+ ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಫಿನ್ ಅಲೆನ್ ಪಾತ್ರರಾಗಿದ್ದಾರೆ. ಈ ಹಿಂದೆ ಕೋರಿ ಆಂಡರ್ಸನ್ ಮತ್ತು ಕಾಲಿನ್ ಮುನ್ರೊ ಅವರು 2017 ಮತ್ತು 2018 ರಲ್ಲಿ ಕ್ರಮವಾಗಿ ತಲಾ 10 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇದೀಗ 10 ಕ್ಕಿಂತ ಹೆಚ್ಚು ಸಿಕ್ಸ್ಗಳನ್ನು ಸಿಡಿಸಿ ಅಲೆನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
7 / 7
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸ್ಕೋರ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಫಿನ್ ಅಲೆನ್ 5ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆರೋನ್ ಫಿಂಚ್ ಅಗ್ರಸ್ಥಾನದಲ್ಲಿದ್ದಾರೆ. 2018 ರಲ್ಲಿ ಝಿಂಬಾಬ್ವೆ ವಿರುದ್ಧ ಫಿಂಚ್ 172 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ 137 ರನ್ ಬಾರಿಸುವ ಮೂಲಕ ಫಿನ್ ಅಲೆನ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.