ಹಾಗೆಯೇ ಈ ಪಂದ್ಯದಲ್ಲಿ 16 ಸಿಕ್ಸ್ಗಳನ್ನು ಸಿಡಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನ ಇನಿಂಗ್ಸ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲೂ ಅಲೆನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಹಿಂದೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಅಫ್ಘಾನಿಸ್ತಾದ ಆರಂಭಿಕ ಆಟಗಾರ ಹಝರುತುಲ್ಲಾ ಝಝೈ ಹೆಸರಿನಲ್ಲಿತ್ತು. 2019 ರಲ್ಲಿ ಐರ್ಲೆಂಡ್ ವಿರುದ್ಧ ಝಝೈ ಒಟ್ಟು 16 ಸಿಕ್ಸ್ಗಳನ್ನು ಸಿಡಿಸಿದ್ದರು. ಇದೀಗ ಫಿನ್ ಅಲೆನ್ ಕೂಡ 16 ಸಿಕ್ಸ್ ಬಾರಿಸಿ ಈ ವಿಶ್ವ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.