ಡ್ಯುನೆಡಿನ್ನ ಯೂನಿವರ್ಸಿಟಿ ಓವಲ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ನ ಫಿನ್ ಅಲೆನ್ (Finn Allen) ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಫಿನ್ ಅಲೆನ್ ಸಿಡಿಲಬ್ಬರದ ಆರಂಭ ಒದಗಿಸಿದರು.