
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹಲವು ಆಟಗಾರರು ಒಂದೇ ಇನಿಂಗ್ಸ್ಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ್ದಾರೆ. ಆದರೆ ಕಳೆದ 18 ಸೀಸನ್ಗಳಲ್ಲಿ ಯಾವುದೇ ಬ್ಯಾಟರ್ಗೂ ಒಂದೇ ಸೀಸನ್ನಲ್ಲಿ ಈ ಬಾರಿ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಂತಹದೊಂದು ದಾಖಲೆ ಬರೆದು ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL)

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 10 ಗಗನಚುಂಬಿ ಸಿಕ್ಸರ್‌ಗಳೊಂದಿಗೆ 93 ರನ್ ಬಾರಿಸಿದ್ದರು. ಈ ಸಿಕ್ಸರ್‌ಗಳೊಂದಿಗೆ ಐಪಿಎಲ್ ಇತಿಹಾಸದಲ್ಲೇ ಒಂದೇ ಸೀಸನ್ನಲ್ಲಿ ಎರಡು ಬಾರಿ 10 ಸಿಕ್ಸ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: IPL)

ಇದಕ್ಕೂ ಮುನ್ನ ಫಿನ್ ಅಲೆನ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ 5 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 100 ರನ್ ಚಚ್ಚಿದ್ದರು. ಇದೀಗ ಮತ್ತೊಮ್ಮೆ 10 ಸಿಕ್ಸ್ ಸಿಡಿಸಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. (PC: IPL)

ಹಾಗೆಯೇ ಚೊಚ್ಚಲ ಐಪಿಎಲ್ ಸೀಸನ್‌ನಲ್ಲೇ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಕೂಡ ಅಲೆನ್ ಪಾಲಾಗಿದೆ. ಅಲೆನ್ ಈ ಬಾರಿ ಒಟ್ಟು 27 ಸಿಕ್ಸ್ ಸಿಡಿಸಿದ್ದು, ಈ ಮೂಲಕ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. (PC: IPL)

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 47 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ= ಫಿನ್ ಅಲೆನ್, ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಇಅತ್ಯಂತ ವೇಗದ ಐಪಿಎಲ್ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದರು. ಇದೀಗ ಸಿಕ್ಸರ್‌ಗಳೊಂದಿಗೆ ಕೂಡ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)