AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಬತ್ತು W… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ

Australia vs South Africa, 1st T20I: ಆಸ್ಟ್ರೇಲಿಯಾ-ಸೌತ್ ಅಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಈ ಸರಣಿ ಮೊದಲ ಮ್ಯಾಚ್​ನಲ್ಲಿ ಆಸೀಸ್ ಪಡೆ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Aug 11, 2025 | 8:30 AM

Share
ಸೌತ್ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಡಾರ್ವಿನ್​ನ ಮರ್ರಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿತು.

1 / 5
ಮೊದಲು ಬ್ಯಾಟಿಂಗ್​ ಮಾಡಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 30 ರನ್​ಗಳಿಸುವಷ್ಟರಲ್ಲಿ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಬ್ಯಾಟಿಂಗ್​ಗೆ ಇಳಿದ ಟಿಮ್ ಡೇವಿಡ್ 52 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 83 ರನ್​ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 178 ರನ್ ಕಲೆಹಾಕಿತು.

2 / 5
179 ರನ್​ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ 55 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 71 ರನ್​ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 161 ರನ್​ಗಳಿಸಲಷ್ಟೇ ಶಕ್ತರಾದರು.

3 / 5
ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಟಿ20 ಪಂದ್ಯಗಳಲ್ಲಿ 17 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್​ನಲ್ಲಿ ಸತತ 9 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದ ಸಾಧನೆ ಮಾಡಿದೆ. ಇದಕ್ಕೂ ಮುನ್ನ ಆಸೀಸ್ ಪಡೆ ಸತತ 8 ಪಂದ್ಯಗಳನ್ನು ಗೆದ್ದುಕೊಂಡಿದ್ದರು.

4 / 5
ಆದರೆ 2024ರ ಟಿ20 ವಿಶ್ವಕಪ್​ ಬಳಿಕ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಈ ಮೂಲಕ ಸತತ 9 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಟಿ20 ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಮ್ಯಾಚ್​ಗಳನ್ನು ಗೆದ್ದ ವಿಶ್ವ ದಾಖಲೆ (ಟೆಸ್ಟ್ ಆಡುವ ದೇಶಗಳ ಪಟ್ಟಿಯಲ್ಲಿ) ಟೀಮ್ ಇಂಡಿಯಾ ಹೆಸರಿನಲ್ಲಿದೆ. ಭಾರತ ತಂಡವು ಸತತ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದೆ. ಇದೀಗ 9 ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪಡೆ ಟೀಮ್ ಇಂಡಿಯಾದ ದಾಖಲೆಯತ್ತ ದಾಪುಗಾಲಿಟ್ಟಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ