- Kannada News Photo gallery Cricket photos first time ever Australia won 9 consecutive Matches in T20I History
ಒಂಬತ್ತು W… ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ
Australia vs South Africa, 1st T20I: ಆಸ್ಟ್ರೇಲಿಯಾ-ಸೌತ್ ಅಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಈ ಸರಣಿ ಮೊದಲ ಮ್ಯಾಚ್ನಲ್ಲಿ ಆಸೀಸ್ ಪಡೆ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದೆ.
Updated on: Aug 11, 2025 | 8:30 AM

ಸೌತ್ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಜಯ ಸಾಧಿಸಿದೆ. ಡಾರ್ವಿನ್ನ ಮರ್ರಾರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಿತು.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 30 ರನ್ಗಳಿಸುವಷ್ಟರಲ್ಲಿ 3 ಪ್ರಮುಖ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಬ್ಯಾಟಿಂಗ್ಗೆ ಇಳಿದ ಟಿಮ್ ಡೇವಿಡ್ 52 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 83 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 20 ಓವರ್ಗಳಲ್ಲಿ 178 ರನ್ ಕಲೆಹಾಕಿತು.

179 ರನ್ಗಳ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ 55 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 71 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 161 ರನ್ಗಳಿಸಲಷ್ಟೇ ಶಕ್ತರಾದರು.

ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಟಿ20 ಪಂದ್ಯಗಳಲ್ಲಿ 17 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್ನಲ್ಲಿ ಸತತ 9 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದ ಸಾಧನೆ ಮಾಡಿದೆ. ಇದಕ್ಕೂ ಮುನ್ನ ಆಸೀಸ್ ಪಡೆ ಸತತ 8 ಪಂದ್ಯಗಳನ್ನು ಗೆದ್ದುಕೊಂಡಿದ್ದರು.

ಆದರೆ 2024ರ ಟಿ20 ವಿಶ್ವಕಪ್ ಬಳಿಕ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಈ ಮೂಲಕ ಸತತ 9 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಟಿ20 ಕ್ರಿಕೆಟ್ನಲ್ಲಿ ಸತತವಾಗಿ ಅತ್ಯಧಿಕ ಮ್ಯಾಚ್ಗಳನ್ನು ಗೆದ್ದ ವಿಶ್ವ ದಾಖಲೆ (ಟೆಸ್ಟ್ ಆಡುವ ದೇಶಗಳ ಪಟ್ಟಿಯಲ್ಲಿ) ಟೀಮ್ ಇಂಡಿಯಾ ಹೆಸರಿನಲ್ಲಿದೆ. ಭಾರತ ತಂಡವು ಸತತ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ. ಇದೀಗ 9 ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪಡೆ ಟೀಮ್ ಇಂಡಿಯಾದ ದಾಖಲೆಯತ್ತ ದಾಪುಗಾಲಿಟ್ಟಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




