AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಅತ್ಯಂತ ಹೀನಾಯ… ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸೋತ ಆಸ್ಟ್ರೇಲಿಯಾ

Australia vs South Africa: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೌತ್ ಆಫ್ರಿಕಾ ತಂಡವು 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಸರಣಿಯ ಮೊದಲ ಮ್ಯಾಚ್​​ನಲ್ಲಿ 98 ರನ್​​ಗಳ ಜಯ ಸಾಧಿಸಿದ್ದ ಸೌತ್ ಆಫ್ರಿಕಾ ಇದೀಗ ದ್ವಿತೀಯ ಪಂದ್ಯದಲ್ಲಿ 84 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಸೋಲುಗಳೊಂದಿಗೆ ಆಸ್ಟ್ರೇಲಿಯಾ ತಂಡವು ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಝಾಹಿರ್ ಯೂಸುಫ್
|

Updated on:Aug 24, 2025 | 7:54 AM

Share
ಆಸ್ಟ್ರೇಲಿಯಾ ತಂಡವು ಏಕದಿನ ಕ್ರಿಕೆಟ್​ ಆಡಲು ಶುರುವಾಗಿ 54 ವರ್ಷಗಳಾಗಿವೆ. ಈ ಐವತ್ತ ನಾಲ್ಕು ವರ್ಷಗಳಲ್ಲಿ ಕಂಡರಿಯರ ಕೇಳರಿಯದ ರೀತಿಯಲ್ಲಿ ಆಸೀಸ್ ಪಡೆ ಇದೇ ಮೊದಲ ಬಾರಿಗೆ ಮುಗ್ಗರಿಸಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ ನಾಲ್ಕು ಪಂದ್ಯಗಳಲ್ಲಿ ಎಂಬುದೇ ಅಚ್ಚರಿ.

1 / 6
ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಆಡಿದ ಕಳೆದ ನಾಲ್ಕು ಪಂದ್ಯಗಳಲ್ಲೂ 200 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ. ಅಂದರೆ ತವರಿನಲ್ಲಿ ನಡೆದ ಕೊನೆಯ ನಾಲ್ಕು ಒಡಿಐ ಮ್ಯಾಚ್​​ಗಳಲ್ಲಿ ಸೋತಿದ್ದು ಮಾತ್ರವಲ್ಲ, ಬದಲಾಗಿ ಒಂದೇ ಒಂದು ಪಂದ್ಯದಲ್ಲಿ 200 ರನ್​ ಕಲೆಹಾಕಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

2 / 6
ಕಳೆದ 54 ವರ್ಷಗಳ ಏಕದಿನ ಇತಿಹಾಸದಲ್ಲಿ ಆಸ್ಟ್ರೇಲಿಯಾ ತಂಡವು ಒಮ್ಮೆಯೂ ತವರಿನಲ್ಲಿ ಸತತ 4 ಪಂದ್ಯಗಳಲ್ಲಿ 200 ಕ್ಕಿಂತ ಕಡಿಮೆ ಸ್ಕೋರ್​​​ ಗಳಿಸಿ ಆಲೌಟ್ ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಆಸೀಸ್ ಪಡೆಯನ್ನು ಮಕಾಡೆ ಮಲಗಿಸುವಲ್ಲಿ ಪಾಕಿಸ್ತಾನ್ ಹಾಗೂ ಸೌತ್ ಆಫ್ರಿಕಾ ತಂಡಗಳು ಯಶಸ್ವಿಯಾಗಿದೆ.

3 / 6
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 2-1 ಅಂತರದಿಂದ ಗೆದ್ದುಕೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಈ ಸರಣಿಯ 2ನೇ ಪಂದ್ಯದಲ್ಲಿ ಆತಿಥೇಯರನ್ನು ಪಾಕ್ ಪಡೆ 163 ರನ್​ಗಳಿಗೆ ಆಲೌಟ್ ಮಾಡಿದ್ದರು. ಇನ್ನು ಮೂರನೇ ಏಕದಿನ ಪಂದ್ಯದಲ್ಲಿ ಪಾಕ್ ವಿರುದ್ಧ ಆಸ್ಟ್ರೇಲಿಯಾ ಕೇವಲ 140 ರನ್​ಗಳಿಸಿ ಆಲೌಟ್ ಆಗಿತ್ತು.

4 / 6
ಈ ಸರಣಿಯ ಬಳಿಕ ಆಸ್ಟ್ರೇಲಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 198 ರನ್​​ಗಳಿಗೆ ಆಲೌಟ್ ಮಾಡುವಲ್ಲಿ ಸೌತ್ ಆಫ್ರಿಕಾ ಬೌಲರ್​​ಗಳು ಯಶಸ್ವಿಯಾಗಿದ್ದಾರೆ. ಇನ್ನು 2ನೇ ಏಕದಿನ ಪಂದ್ಯದಲ್ಲಿ 193 ರನ್​​ಗಳಿಗೆ ಆಸೀಸ್ ಪಡೆ ಸರ್ವಪತನ ಕಂಡಿದೆ.

5 / 6
ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ತಂಡವು ತವರಿನಲ್ಲಿ ಬ್ಯಾಕ್ ಟು ಬ್ಯಾಕ್ 4 ಏಕದಿನ ಪಂದ್ಯದಲ್ಲಿ 200 ರನ್​​ ಗಳಿಸಲಾಗದೇ ಹೀನಾಯವಾಗಿ ಸೋಲನುಭವಿಸಿದೆ. ಈ ಅವಮಾನಕರ ಸೋಲುಗಳೊಂದಿಗೆ ತವರಿನ ಹುಲಿಗಳೆಂದು ಗುರುತಿಸಿಕೊಂಡಿದ್ದ ಆಸ್ಟ್ರೇಲಿಯಾ ತಂಡವು ಭಾರೀ ಮುಖಭಂಗ ಅನುಭವಿಸಿದೆ.

6 / 6

Published On - 7:54 am, Sun, 24 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ