ಟೀಮ್ ಇಂಡಿಯಾದಿಂದ ಹೊರಬಿದ್ದ ಐವರು ಆಟಗಾರರು
India T20 Squad 2025: ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಗಾಗಿ 15 ಸದಸ್ಯರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿದ್ದಾರೆ.
1 / 9
ಜನವರಿ 22 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 5 ಪಂದ್ಯಗಳ ಈ ಸರಣಿಗಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಇತ್ತ ಟೀಮ್ ಇಂಡಿಯಾಗೆ ಐವರು ಆಟಗಾರರು ಎಂಟ್ರಿ ಕೊಟ್ಟರೆ, ಅತ್ತ ಭಾರತ ತಂಡದಿಂದ ಐವರು ಆಟಗಾರರು ಹೊರಬಿದ್ದಿದ್ದಾರೆ.
2 / 9
ಅಂದರೆ ಭಾರತ ತಂಡದ ಪರ ಕೊನೆಯ ಟಿ20 ಸರಣಿ ವೇಳೆ ಕಾಣಿಸಿಕೊಂಡಿದ್ದ ಐವರು ಆಟಗಾರರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗೆ ಅವಕಾಶ ವಂಚಿತರಾದ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...
3 / 9
ವಿಜಯಕುಮಾರ್ ವೈಶಾಕ್: ಸೌತ್ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯಲ್ಲಿ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
4 / 9
ಅವೇಶ್ ಖಾನ್: ಭಾರತ ತಂಡದ ಕೊನೆಯ ಟಿ20 ಸರಣಿಯಲ್ಲಿ ವೇಗದ ಬೌಲರ್ ಅವೇಶ್ ಖಾನ್ ಕೂಡ ಕಾಣಿಸಿಕೊಂಡಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ 25 ಟಿ20 ಪಂದ್ಯಗಳನ್ನಾಡಿರುವ ಅವೇಶ್ ಅವರನ್ನು ಇಂಗ್ಲೆಂಡ್ ಸರಣಿಗೆ ಆಯ್ಕೆ ಮಾಡಿಲ್ಲ.
5 / 9
ಯಶ್ ದಯಾಳ್: ಆರ್ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ಕೂಡ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ಯಶ್ ದಯಾಳ್ಗೆ ಸ್ಥಾನ ನೀಡಲಾಗಿಲ್ಲ.
6 / 9
ರಮಣ್ದೀಪ್ ಸಿಂಗ್: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ರಮಣ್ದೀಪ್ ಸಿಂಗ್ ಟೀಮ್ ಇಂಡಿಯಾ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಅದ್ಭುತ ಫೀಲ್ಡಿಂಗ್ ಮತ್ತು ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಇದಾಗ್ಯೂ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿಲ್ಲ.
7 / 9
ಜಿತೇಶ್ ಶರ್ಮಾ: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಕಾಣಿಸಿಕೊಂಡಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
8 / 9
ಭಾರತ ತಂಡಕ್ಕೆ ಆಯ್ಕೆಯಾದ ಐವರು ಆಟಗಾರರು: ಮೊಹಮ್ಮದ್ ಶಮಿ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
9 / 9
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).