
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ...

ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27 ಪಂದ್ಯಗಳನ್ನಾಡಿರುವ ಬ್ರಾರ್ ಈವರೆಗೆ 64 ವಿಕೆಟ್ ಕಬಳಿಸಿದ್ದಾರೆ.

ಹರ್ಷ್ ದುಬೆ (Harsh Dubey): ವಿದರ್ಭ ತಂಡದ ರಣಜಿ ಟ್ರೋಫಿಯಲ್ಲಿ ದಾಖಲೆಯ ವಿಕೆಟ್ ಪಡೆದ ಎಡಗೈ ಸ್ಪಿನ್ ಆಲ್ ರೌಂಡರ್ ಹರ್ಷ್ ದುಬೆ ಅವರನ್ನು ಈ ಬಾರಿ ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ಆಯ್ಕೆ ಮಾಡಿದ್ದಾರೆ. ಹರ್ಷ್ ದೇಶೀಯ ಅಂಗಳದಲ್ಲಿ ಈವರೆಗೆ 57 ಪಂದ್ಯಗಳಿಂದ 164 ವಿಕೆಟ್ ಕಬಳಿಸಿದ್ದಾರೆ.

ಪ್ರಿನ್ಸ್ ಯಾದವ್ (Prince Yadav): ದೆಹಲಿ ಮೂಲದ ಪ್ರಿನ್ಸ್ ಯಾದವ್ ದೇಶೀಯ ಅಂಗಳದಲ್ಲಿ ಈವರೆಗೆ ಆಡಿರುವುದು ಕೇವಲ 16 ಪಂದ್ಯಗಳು. ಈ ವೇಳೆ 30 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಈ ಬಾರಿಯ ಐಪಿಎಲ್ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದಾರೆ. ಅದರ ಫಲವಾಗಿ ಇದೀಗ ಪ್ರಿನ್ಸ್ ಯಾದವ್ ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮಾನವ್ ಸುತಾರ್ (Manav Suthar): ರಾಜಸ್ಥಾನದ ಎಡಗೈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಆಗಿರುವ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸುತಾರ್ ಈವರೆಗೆ 54 ದೇಶೀಯ ಪಂದ್ಯಗಳನ್ನಾಡಿದ್ದು, ಈ ವೇಳೆ 163 ವಿಕೆಟ್ ಕಬಳಿಸಿದ್ದಾರೆ. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಟೆಸ್ಟ್ ಟೀಮ್ಗೆ ಆಯ್ಕೆಯಾಗಿದ್ದಾರೆ.

ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್, ಹರ್ಷ್ ದುಬೆ,

ಭಾರತ ಏಕದಿನ ತಂಡ: ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.