AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1

ICC Rankings 2026: ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಟೀಮ್ ಇಂಡಿಯಾದ್ದೇ ಕಾರುಬಾರು. ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತೀಯ ಆಟಗಾರರು ಅಧಿಪತ್ಯ ಸ್ಥಾಪಿಸಿದ್ದು, ವಿಶ್ವ ಕ್ರಿಕೆಟ್‌ನ ಸಿಂಹಾಸನವನ್ನು ಸಂಪೂರ್ಣವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಭಾರತದ ನಾಲ್ವರು ಆಟಗಾರರು ಅಗ್ರಸ್ಥಾನ ಅಲಂಕರಿಸಿರುವುದು.

ಝಾಹಿರ್ ಯೂಸುಫ್
|

Updated on: Jul 30, 2026 | 2:02 PM

Share
ಐಸಿಸಿ ಪ್ರಕಟಿಸಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಏಕದಿನ ಹಾಗೂ ಟಿ20 ಕ್ರಿಕೆಟ್‌ನ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಇಬ್ಬರು ಯುವ ದಾಂಡಿಗರು ವಿಶ್ವದ ನಂ. 1 ಸ್ಥಾನ ಅಲಂಕರಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ಹಾಗೂ ಆಲ್‌ರೌಂಡರ್ ವಿಭಾಗಗಳಲ್ಲಿ ಮತ್ತಿಬ್ಬರು ಅನುಭವಿ ಆಟಗಾರರು ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿ ಈ ಕೆಳಗಿನಂತಿದೆ... (PC: Getty Images)

1 / 5
ಶುಭ್​ಮನ್ ಗಿಲ್ (ಏಕದಿನ): ಭಾರತ ಏಕದಿನ ತಂಡದ ನಾಯಕ ಶುಭ್‌ಮನ್ ಗಿಲ್, ನ್ಯೂಝಿಲೆಂಡ್‌ನ ಡ್ಯಾರಿಲ್ ಮಿಚೆಲ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ 1 ಏಕದಿನ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಏಕದಿನ ಬ್ಯಾಟರ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. (PC: Getty Images)

2 / 5
ಇಶಾನ್ ಕಿಶನ್ (ಟಿ20): ಟೀಮ್ ಇಂಡಿಯಾದ ಯುವ ಸ್ಫೋಟಕ ದಾಂಡಿಗ ಇಶಾನ್ ಕಿಶನ್ ಝಿಂಬಾಬ್ವೆ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದೊಂದಿಗೆ ಒಟ್ಟು 910 ರೇಟಿಂಗ್ ಪಾಯಿಂಟ್ಸ್ ಪಡೆದಿರುವ ಇಶಾನ್ ಕಿಶನ್, ಪ್ರಸ್ತುತ ಟಿ20 ಕ್ರಿಕೆಟ್‌ನ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. (PC: Getty Images)

3 / 5
ಜಸ್​ಪ್ರೀತ್ ಬುಮ್ರಾ (ಟೆಸ್ಟ್​): ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್​ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಇದೀಗ ಟೆಸ್ಟ್ ಬೌಲರ್​ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. (PC: Getty Images)

4 / 5
ರವೀಂದ್ರ ಜಡೇಜಾ (ಟೆಸ್ಟ್​): ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಆಲ್​ರೌಂಡರ್​ಗಳ ಪಟ್ಟಿಯಲ್ಲಿ  446 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಈ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದಾರೆ. (PC: Getty Images)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್

ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ

ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ

ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ

ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್

ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್

ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ

ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ

ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ