3- ಒಂದು ವರ್ಷದಲ್ಲಿ ಅತ್ಯಧಿಕ ಶತಕ: ಏಕದಿನ ಕ್ರಿಕೆಟ್ನಲ್ಲಿ ಒಂದೇ ವರ್ಷ 5 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್ಮನ್ ಗಿಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಶಿಖರ್ ಧವನ್, ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದರು.