Shubman Gill: ಗಿಲ್​ ಗಿಲಕ್​ಗೆ ಹಳೆಯ ದಾಖಲೆಗಳು ಧೂಳೀಪಟ

| Updated By: ಝಾಹಿರ್ ಯೂಸುಫ್

Updated on: Sep 24, 2023 | 10:23 PM

Shubman Gill Records: ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನ ಹಲವು ದಾಖಲೆಗಳನ್ನು 24 ವರ್ಷದ ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ...

1 / 12
ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಗಿಲ್ 97 ಎಸೆತಗಳಲ್ಲಿ 6 ಫೋರ್ ಹಾಗೂ 4 ಸಿಕ್ಸ್​ನೊಂದಿಗೆ 104 ರನ್ ಬಾರಿಸಿದ್ದರು.

2 / 12
ಈ ಸೆಂಚುರಿಯೊಂದಿಗೆ ಏಕದಿನ ಕ್ರಿಕೆಟ್​ನ ಹಲವು ದಾಖಲೆಗಳನ್ನು 24 ವರ್ಷದ ಶುಭ್​ಮನ್ ಗಿಲ್ ತಮ್ಮದಾಗಿಸಿಕೊಂಡರು. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ವಿವರ ಈ ಕೆಳಗಿನಂತಿದೆ...

3 / 12
1- 6 ಶತಕಗಳ ದಾಖಲೆ: ಟೀಮ್ ಇಂಡಿಯಾ ಪರ ಅತೀ ವೇಗವಾಗಿ 6 ಶತಕಗಳನ್ನು ಬಾರಿಸಿದ ದಾಖಲೆ ಇದೀಗ ಶುಭ್​ಮನ್ ಗಿಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶಿಖರ್ ಧವನ್ ಹೆಸರಿನಲ್ಲಿತ್ತು. ಧವನ್ 46 ಏಕದಿನ ಇನಿಂಗ್ಸ್​ಗಳಲ್ಲಿ 6 ಶತಕ ಸಿಡಿಸಿದರೆ, ಶುಭ್​ಮನ್ ಗಿಲ್ ಕೇವಲ 35 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದಾರೆ.

4 / 12
2- 5 ಸೆಂಚುರಿಗಳ ಸಾಧನೆ: 25 ವರ್ಷ ತುಂಬುವ ಮುನ್ನ ಏಕದಿನ ಕ್ರಿಕೆಟ್​ನಲ್ಲಿ 5+ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಗಿಲ್​ ಕೂಡ ಸೇರ್ಪಡೆಯಾಗಿದ್ದಾರೆ. ಸಚಿನ್ ತೆಂಡೂಲ್ಕರ್ (1996), ಗ್ರೇಮ್ ಸ್ಮಿತ್ (2005), ಉಪುಲ್ ತರಂಗ (2006) ಹಾಗೂ ವಿರಾಟ್ ಕೊಹ್ಲಿ (2012) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ವಿಶೇಷ ಸಾಧಕರ ಪಟ್ಟಿಗೆ ಗಿಲ್ ಹೆಸರು ಸೇರ್ಪಡೆಯಾಗಿರುವುದು ವಿಶೇಷ.

5 / 12
3- ಒಂದು ವರ್ಷದಲ್ಲಿ ಅತ್ಯಧಿಕ ಶತಕ: ಏಕದಿನ ಕ್ರಿಕೆಟ್​ನಲ್ಲಿ ಒಂದೇ ವರ್ಷ 5 ಅಥವಾ ಅದಕ್ಕಿಂತ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಶಿಖರ್ ಧವನ್, ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದರು.

6 / 12
4- ಆತ್ಯಧಿಕ ಸೆಂಚುರಿ: 2023 ರಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಶುಭ್​ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ. ಗಿಲ್ 39 ಇನಿಂಗ್ಸ್​ಗಳಿಂದ 7 ಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ 22 ಇನಿಂಗ್ಸ್​ಗಳಲ್ಲಿ 5 ಸೆಂಚುರಿ ಸಿಡಿಸಿದ್ದಾರೆ.

7 / 12
5- ಅತ್ಯಧಿಕ ರನ್: ಏಕದಿನ ಕ್ರಿಕೆಟ್​ನಲ್ಲಿ ಮೊದಲ 35 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಶುಭ್​ಮನ್ ಗಿಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಹಾಶಿಮ್ ಆಮ್ಲ ಹೆಸರಿನಲ್ಲಿತ್ತು. ಆಮ್ಲ ಮೊದಲ 35 ಏಕದಿನ ಇನಿಂಗ್ಸ್​ಗಳಲ್ಲಿ ಆಮ್ಲ 1844 ರನ್​ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಶುಭ್​ಮನ್ ಗಿಲ್ 35 ಇನಿಂಗ್ಸ್​ಗಳಲ್ಲಿ 1917 ರನ್ ಕಲೆಹಾಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

8 / 12
6- ಅತ್ಯಧಿಕ ಸೆಂಚುರಿ: 25 ವಯಸ್ಸಿಗೂ ಮುನ್ನ ಟೀಮ್ ಇಂಡಿಯಾ ಪರ ಅತ್ಯಧಿಕ ಶತಕ ಬಾರಿಸಿದ ಆರಂಭಿಕರ ಪಟ್ಟಿಯಲ್ಲಿ ಗಿಲ್​ಗೆ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ 14 ಸೆಂಚುರಿ ಸಿಡಿಸಿದ್ದ ಸಚಿನ್ ಅಗ್ರಸ್ಥಾನದಲ್ಲಿದ್ದು, ಇದೀಗ 8 ಶತಕಗಳೊಂದಿಗೆ ಗಿಲ್ ದ್ವಿತೀಯ ಸ್ಥಾನದಲ್ಲಿದ್ದಾರೆ.

9 / 12
7- ಆರಂಭಿಕನ ದಾಖಲೆ: ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಮೊದಲ 30 ಇನಿಂಗ್ಸ್​ಗಳಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಕೂಡ ಶುಭ್​ಮನ್ ಗಿಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ಆರಂಭಿಕನಾಗಿ ಆಡಿದ ಮೊದಲ 30 ಇನಿಂಗ್ಸ್​ಗಳಲ್ಲಿ 12 ಬಾರಿ 50+ ಸ್ಕೋರ್​ಗಳಿಸಿದ್ದರು. ಇದೀಗ 13ನೇ ಬಾರಿ 50+ ಸ್ಕೋರ್​ಗಳಿಸಿ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

10 / 12
8- ಶತಕದ ಸರದಾರ: ಒಂದು ಕ್ಯಾಲೆಂಡರ್ ವರ್ಷದೊಳಗೆ ಭಾರತದಲ್ಲಿ ಅತ್ಯಧಿಕ ಶತಕ ಬಾರಿಸಿದ ಟೀಮ್ ಇಂಡಿಯಾ ಬ್ಯಾಟರ್ ಎಂಬ ದಾಖಲೆ ಕೂಡ ಗಿಲ್​ ಹೆಸರಿಗೆ ಸೇರ್ಪಡೆಯಾಗಿದೆ. ಇದುವರೆಗೆ ಈ ದಾಖಲೆ ಸಚಿನ್ ಅವರ ಹೆಸರಿನಲ್ಲಿತ್ತು. ಸಚಿನ್ 1996 ರಲ್ಲಿ ಭಾರತದಲ್ಲಿ 3 ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 4ನೇ ಸೆಂಚುರಿ ಸಿಡಿಸುವ ಮೂಲಕ ಶುಭ್​ಮನ್ ಗಿಲ್ ಒಂದು ಕ್ಯಾಲೆಂಡರ್ ವರ್ಷದೊಳಗೆ ಭಾರತದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

11 / 12
9- ಸಿಕ್ಸರ್ ಕಿಂಗ್: 2023 ರಲ್ಲಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್ ಅಗ್ರಸ್ಥಾನಕ್ಕೇರಿದ್ದಾರೆ. ಈ ವರ್ಷ ಗಿಲ್ ಒಟ್ಟು 44 ಸಿಕ್ಸ್​ಗಳನ್ನು ಬಾರಿಸಿದರೆ, ರೋಹಿತ್ ಶರ್ಮಾ 43 ಸಿಕ್ಸ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

12 / 12
10- 1900 ರನ್​: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 35 ಇನಿಂಗ್ಸ್​ಗಳಲ್ಲಿ 1900+ ರನ್​ಗಳಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಕೂಡ ಶುಭ್​ಮನ್ ಗಿಲ್ ಪಾಲಾಗಿದೆ.