- ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.