Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Oct 23, 2022 | 10:58 PM

Virat Kohli's Records: ಆಸ್ಟ್ರೇಲಿಯಾ ವಿರುದ್ಧ 4 ಅರ್ಧಶತಕ ಬಾರಿಸಿದ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

1 / 10
ಟಿ20 ವಿಶ್ವಕಪ್​ನಲ್ಲಿನ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಗೆ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

2 / 10
ವಿಶೇಷ ಎಂದರೆ ಈ ಭರ್ಜರಿ ಇನಿಂಗ್ಸ್​ ಮೂಲಕ ಕಿಂಗ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಹಾಗಿದ್ರೆ ಪಾಕ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿರುವ ವಿಶ್ವ ದಾಖಲೆಗಳಾವುವು ಎಂದು ನೋಡೋಣ...

3 / 10
- ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಪಾಕ್ ವಿರುದ್ಧ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆಯುವ ಮೂಲಕ 14ನೇ ಬಾರಿ ಈ ಗೌರವಕ್ಕೆ ಪಾತ್ರದರು.

4 / 10
ಇದಕ್ಕೂ ಮುನ್ನ ಈ ದಾಖಲೆ ಅಫ್ಘಾನಿಸ್ತಾನದ ಆಟಗಾರ ಮೊಹಮ್ಮದ್ ನಬಿ ಹೆಸರಿನಲ್ಲಿತ್ತು. ನಬಿ 13 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ಈ ದಾಖಲೆ ನಿರ್ಮಿಸಿದ್ದರು.

5 / 10
- ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ಹಿರಿಮೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಟಿ20 ವಿಶ್ವಕಪ್​ಗಳಲ್ಲಿ 6 ಬಾರಿ ಪಂದ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದು ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

6 / 10
- ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಬಾರಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಕೂಡ ಕೊಹ್ಲಿ ಪಾಲಾಗಿದೆ. ಈ ಹಿಂದೆ 851 ರನ್ ಬಾರಿಸಿದ್ದ ರೋಹಿತ್ ಶರ್ಮಾ ಹೆಸರಿನಲ್ಲಿತ್ತು ಈ ದಾಖಲೆ. ಇದೀಗ ಒಟ್ಟು 927 ರನ್​ಗಳಿಸಿ ಹೊಸ ದಾಖಲೆ ಬರೆದಿದ್ದಾರೆ.

7 / 10
- ಟಿ20 ವಿಶ್ವಕಪ್​ನಲ್ಲಿ ಒಂದು ತಂಡದ ವಿರುದ್ಧ ಅತ್ಯಧಿಕ ಬಾರಿ 50+ ರನ್​ಗಳಿಸಿದ ವಿಶ್ವ ದಾಖಲೆಯನ್ನು ಕೂಡ ಕೊಹ್ಲಿ ನಿರ್ಮಿಸಿದ್ದಾರೆ. ಕಿಂಗ್ ಕೊಹ್ಲಿ ಪಾಕಿಸ್ತಾನ್ ವಿರುದ್ಧ 4 ಅರ್ಧಶತಕ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧ 4 ಅರ್ಧಶತಕ ಬಾರಿಸಿದ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

8 / 10
- ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್​ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

9 / 10
- ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

10 / 10
ಒಟ್ಟಿನಲ್ಲಿ ಒಂದು ಭರ್ಜರಿ ಇನಿಂಗ್ಸ್​ ಮೂಲಕ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿ ಕಿಂಗ್ ಕೊಹ್ಲಿ ಮತ್ತೊಮ್ಮೆ ಕ್ರಿಕೆಟ್ ಅಂಗಳದ ರಾಜನಾಗಿ ಮೆರೆದಿರುವುದು ವಿಶೇಷ.