IND vs AUS: ಗಾಬಾ ಟೆಸ್ಟ್ ಮಳೆಗಾಹುತಿಯಾದರೆ ಟೀಂ ಇಂಡಿಯಾಕ್ಕಾಗುವ ನಷ್ಟವೇನು?

India's chances WTC final: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದೆ. ಡಬ್ಲ್ಯುಟಿಸಿ ಫೈನಲ್‌ಗೆ ಭಾರತದ ಅರ್ಹತೆ ಈ ಪಂದ್ಯದ ಫಲಿತಾಂಶವನ್ನು ಅವಲಂಬಿಸಿದೆ. ಪಂದ್ಯ ಡ್ರಾ ಆದರೆ ಭಾರತದ ಸ್ಥಾನ ಬದಲಾಗುವುದಿಲ್ಲ, ಆದರೆ ಗೆದ್ದರೆ ಎರಡನೇ ಸ್ಥಾನಕ್ಕೆ ಏರಬಹುದು.ಒಂದು ವೇಳೆ ಈ ಪಂದ್ಯವನ್ನು ಟೀಂ ಇಂಡಿಯಾ ಸೋತರೆ ಅದರ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ.

ಪೃಥ್ವಿಶಂಕರ
|

Updated on: Dec 14, 2024 | 4:08 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಬ್ಬಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿ ಕಾಂಗರೂ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆದರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಮೊದಲ ದಿನದಾಟವನ್ನು ರದ್ದುಗೊಳಿಸಬೇಕಾಯಿತು.

1 / 6
ಇದೀಗ ಉಳಿದ ನಾಲ್ಕು ದಿನಗಳಲ್ಲಿಯೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದು ಟೀಂ ಇಂಡಿಯಾಕ್ಕೆ ಸಂಕಷ್ಟ ತಂದೊಡಿದೆ. ಏಕೆಂದರೆ ರೋಹಿತ ಪಡೆ ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂದರೆ ಆಸ್ಟ್ರೇಲಿಯಾ ವಿರುದ್ಧ ಉಳಿದ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ. ಹೀಗಾಗಿ ಗಾಬಾ ಟೆಸ್ಟ್​ ನಡೆಯುವುದು ಭಾರತಕ್ಕೆ ಅನಿವಾರ್ಯವಾಗಿದೆ.

2 / 6
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗಾಬಾ ಟೆಸ್ಟ್ ಮಳೆಯಿಂದ ಡ್ರಾಗೊಂಡರೆ, ಪಾಯಿಂಟ್ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಆದರೆ ಇದು ಡಬ್ಲ್ಯುಟಿಸಿ ಫೈನಲ್ ತಲುಪುವ ಭಾರತದ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಂಡವು ಕಾಂಗರೂ ತಂಡದ ವಿರುದ್ಧ ಮುಂದಿನ ಎರಡು ಟೆಸ್ಟ್‌ಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಇತರ ತಂಡಗಳ ಫಲಿತಾಂಶಗಳನ್ನು ಸಹ ಅವಲಂಬಿಸಬೇಕಾಗಿದೆ.

3 / 6
ಒಂದು ವೇಳೆ ಗಾಬಾ ಟೆಸ್ಟ್ ಡ್ರಾ ಆದರೆ, ಆಸ್ಟ್ರೇಲಿಯಾದ ಗೆಲುವಿನ ಶೇಕಡಾವಾರು 58.89 ಆದರೆ, ಭಾರತದ ಗೆಲುವಿನ ಶೇಕಡಾವಾರು 55.88 ಆಗುತ್ತದೆ. ಹೀಗಾಗಿ ಭಾರತ 3ನೇ ಸ್ಥಾನದಲ್ಲೇ ಉಳಿಯಲಿದ್ದು, ಆಸ್ಟ್ರೇಲಿಯ 2ನೇ ಸ್ಥಾನದಲ್ಲೇ ಮುಂದುವರೆಯಲಿದೆ. ದಕ್ಷಿಣ ಆಫ್ರಿಕಾ ಎಂದಿನಂತೆ ಮೊದಲ ಸ್ಥಾನದಲ್ಲೇ ಮುಂದುವರೆಯಲಿದೆ.

4 / 6
ಒಂದು ವೇಳೆ ಗಾಬಾ ಟೆಸ್ಟ್​ನಲ್ಲಿ ಫಲಿತಾಂಶ ಹೊರಬಿದ್ದು, ಟೀಂ ಇಂಡಿಯಾ ಪಂದ್ಯವನ್ನು ಗೆದ್ದರೆ, ಆಗ ಡಬ್ಲ್ಯುಟಿಸಿ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ ಸೋತ ಆಸ್ಟ್ರೇಲಿಯಾ 56.67 ರ ಗೆಲುವಿನ ಶೇಕಡಾವಾರುವಿನೊಂದಿಗೆ ಮೂರನೇ ಸ್ಥಾನಕ್ಕೆ ಜಾರಲಿದೆ.

5 / 6
ಇದಕ್ಕೆ ತದ್ವಿರುದ್ದವಾಗಿ ಗಾಬಾದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಡಬ್ಲ್ಯುಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅದು ಎರಡನೇ ಸ್ಥಾನದಲ್ಲೇ ಮುಂದುವರೆಯಲಿದೆ. ಆದರೆ ಅದರ ಗೆಲುವಿನ ಶೇಕಡಾವಾರು ದಕ್ಷಿಣ ಆಫ್ರಿಕಾದ ಅಗ್ರ ಸ್ಥಾನಕ್ಕೆ ಸಮಾನವಾಗಿರುತ್ತದೆ. ಆದಾಗ್ಯೂ ಭಾರತದ ವಿರುದ್ಧ ಕಾಂಗರೂ ಪಡೆ ಸೋತರೆ ಅದು ಡಬ್ಲ್ಯುಟಿಸಿ ಫೈನಲ್‌ಗೆ ಅರ್ಹತೆ ಪಡೆಯಲು ಇತರ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ.

6 / 6
Follow us
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ

ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್

ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ

ಸತತ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ: ಗಿನ್ನಿಸ್​ ದಾಖಲೆ

ನಟ ದರ್ಶನ್ 45 ದಿನಗಳಿಂದ ಹೊರಗಿದ್ದರೂ ಭೇಟಿಯ ಪ್ರಯತ್ನ ಮಾಡಿಲ್ಲ

ಗದಗ: ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್ ಕೊರೆಸಿದ ಅತ್ತೆ, ಸೊಸೆ!

ಇಂಥ ಎಫ್​ಐಆರ್​ಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲ್ಲ: ಶೆಟ್ಟರ್

ಪತ್ನಿ ಮತ್ತು ಮಕ್ಕಳು ಓಡಿ ಬಂದು ಅರ್ಜುನ್​ರನ್ನು ತಬ್ಬಿಕೊಂಡರು!

ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್

ಮೈಸೂರು ಜಿಲ್ಲೆಯಲ್ಲಿ 13 ವರ್ಷಗಳ ನಂತರ ತೆರೆದ ದೇಗುಲದ ಬಾಗಿಲು