AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘2011 ರ ವಿಶ್ವಕಪ್​ಗೆ ಯುವರಾಜ್ ಸಿಂಗ್ ಮೊದಲ ಆಯ್ಕೆಯಾಗಿರಲಿಲ್ಲ’; ಗ್ಯಾರಿ ಕರ್ಸ್ಟನ್

2011 World Cup: 2011ರ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಅವರ ಆಯ್ಕೆ ಹೇಗೆ ಸವಾಲಿನಿಂದ ಕೂಡಿತ್ತು ಎಂದು ಮಾಜಿ ಕೋಚ್ ಗ್ಯಾರಿ ಕಿರ್ಸ್ಟನ್ ಬಹಿರಂಗಪಡಿಸಿದ್ದಾರೆ. ಆಯ್ಕೆದಾರರ ನಡುವೆ ಭಾರೀ ಚರ್ಚೆ ನಡೆದಿತ್ತು. ಯುವರಾಜ್ ಅವರ ಅದ್ಭುತ ಪ್ರದರ್ಶನ ಮತ್ತು ಗ್ಯಾರಿ ಹಾಗೂ ಧೋನಿ ಅವರ ಬೆಂಬಲದಿಂದ ಅವರು ತಂಡ ಸೇರಿದರು. ಯುವರಾಜ್ ಅವರ ಅದ್ಭುತ ಪ್ರದರ್ಶನದಿಂದ ಭಾರತ ವಿಶ್ವಕಪ್ ಗೆದ್ದುಕೊಂಡಿತು.

ಪೃಥ್ವಿಶಂಕರ
|

Updated on: Jul 19, 2025 | 3:52 PM

Share
ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ 1983 ರ ವಿಶ್ವಕಪ್‌ ಗೆದ್ದುಕೊಂಡಿತು. ಆ ಬಳಿಕ ಮತ್ತೊಂದು ಏಕದಿನ ವಿಶ್ವಕಪ್ ಗೆಲ್ಲಲು ಭಾರತಕ್ಕೆ ಬರೋಬ್ಬರಿ 28 ವರ್ಷಗಳು ಬೇಕಾಯಿತು. ಭಾರತ ಈ ವಿಶ್ವಕಪ್ ಗೆಲ್ಲುವಲ್ಲಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅವರ ಪಾತ್ರ ಅಪಾರವಾಗಿತ್ತು. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಯುವಿ ಅಮೋಘ ಪ್ರದರ್ಶನ ನೀಡಿದ್ದರು.

1 / 5
ಇಂದಿಗೆ ಭಾರತ 2011 ರ ಏಕದಿನ ವಿಶ್ವಕಪ್ ಗೆದ್ದು 14 ವರ್ಷಗಳು ಕಳೆದಿವೆ. ಇದೀಗ ಅಂದಿನ ವಿಶ್ವಕಪ್​ಗೆ ಟೀಂ ಇಂಡಿಯಾ ಆಯ್ಕೆಯ ಬಗ್ಗೆ ಇದ್ದ ಸಮಸ್ಯೆಗಳ ಬಗ್ಗೆ ಅಂದು ತಂಡದ ಮುಖ್ಯ ಕೋಚ್ ಆಗಿದ್ದ ಗ್ಯಾರಿನ ಕ್ರಸ್ಟನ್ ಮಾತನಾಡಿದ್ದು, ಕೆಲವು ಅಚ್ಚರಿಯ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಯುವರಾಜ್ ಸಿಂಗ್ ಬಗ್ಗೆ ಶಾಕಿಂಗ್ ಮಾಹಿತಿಯನ್ನು ಹೊರಹಾಕಿದ್ದಾರೆ.

2 / 5
Rediff.com ಜೊತೆ ಈ ಬಗ್ಗೆ ಮಾತನಾಡಿರುವ ಗ್ಯಾರಿ, ‘2011 ರ ವಿಶ್ವಕಪ್‌ಗೆ ಯುವರಾಜ್ ಸಿಂಗ್ ಅವರನ್ನು ತಂಡಕ್ಕೆ ಆಯ್ಕೆ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. 15 ಆಟಗಾರರನ್ನು ಆಯ್ಕೆ ಮಾಡಲು ಆಯ್ಕೆದಾರರಲ್ಲಿ ಸಾಕಷ್ಟು ಚರ್ಚೆಗಳು ನಡೆದವು. ಅದೃಷ್ಟವಶಾತ್ ನಾವು ಯುವರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾದವು.

3 / 5
ನಾನು ಮತ್ತು ಧೋನಿ ಇಬ್ಬರೂ ಯುವರಾಜ್ ಸಿಂಗ್ ಅವರನ್ನು ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ಸೇರಿಸಿಕೊಳ್ಳಬೇಕೆಂದು ಬಯಸಿದ್ದೆವು. ನಾನು ಯಾವಾಗಲೂ ಯುವರಾಜ್ ಅವರ ದೊಡ್ಡ ಅಭಿಮಾನಿ. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿತ್ತು. ಕೆಲವೊಮ್ಮೆ ಅವರು ನನ್ನನ್ನು ತುಂಬಾ ಕೀಟಲೆ ಮಾಡಿದರೂ ನನಗೆ ಅವರೆಂದರೆ ತುಂಬಾ ಇಷ್ಟ ಎಂದಿದ್ದಾರೆ.

4 / 5
2011 ರ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಅವರ ಪ್ರದರ್ಶನ ತುಂಬಾ ಉತ್ತಮವಾಗಿತ್ತು.
 ಬ್ಯಾಟಿಂಗ್​ನಲ್ಲಿ 362 ರನ್ ಬಾರಿಸಿದ್ದ ಯುವಿ, ಬೌಲಿಂಗ್‌ನಲ್ಲಿ 15 ವಿಕೆಟ್‌ಗಳನ್ನು ಪಡೆದರು. ಈ ಅದ್ಭುತ ಪ್ರದರ್ಶನದಿಂದಾಗಿ ಅವರನ್ನು ಟೂರ್ನಮೆಂಟ್‌ನ ಆಟಗಾರನಾಗಿಯೂ ಆಯ್ಕೆ ಮಾಡಲಾಯಿತು. ಫೈನಲ್‌ನಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿ 28 ವರ್ಷಗಳ ನಂತರ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2011 ರ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಅವರ ಪ್ರದರ್ಶನ ತುಂಬಾ ಉತ್ತಮವಾಗಿತ್ತು. ಬ್ಯಾಟಿಂಗ್​ನಲ್ಲಿ 362 ರನ್ ಬಾರಿಸಿದ್ದ ಯುವಿ, ಬೌಲಿಂಗ್‌ನಲ್ಲಿ 15 ವಿಕೆಟ್‌ಗಳನ್ನು ಪಡೆದರು. ಈ ಅದ್ಭುತ ಪ್ರದರ್ಶನದಿಂದಾಗಿ ಅವರನ್ನು ಟೂರ್ನಮೆಂಟ್‌ನ ಆಟಗಾರನಾಗಿಯೂ ಆಯ್ಕೆ ಮಾಡಲಾಯಿತು. ಫೈನಲ್‌ನಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಸೋಲಿಸಿ 28 ವರ್ಷಗಳ ನಂತರ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ