Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Gambhir: ಗೌತಮ್ ಗಂಭೀರ್ ಕೋಚ್: ಟೀಮ್ ಇಂಡಿಯಾದಿಂದ ಕೊಹ್ಲಿ-ರೋಹಿತ್​ಗೆ ಗೇಟ್ ಪಾಸ್

Gautam Gambhir: ಐಪಿಎಲ್ ಸೀಸನ್-17 ರಲ್ಲಿ ಗೌತಮ್ ಗಂಭೀರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಗಂಭೀರ್ ಅವರ ಮಾರ್ಗದರ್ಶನದಲ್ಲೇ ಈ ಬಾರಿ ಕೆಕೆಆರ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಟೀಮ್ ಇಂಡಿಯಾ ಕೋಚ್ ಮಾಡಲು ಬಿಸಿಸಿಐ ಮುಂದಾಗಿದೆ.

ಝಾಹಿರ್ ಯೂಸುಫ್
|

Updated on: May 29, 2024 | 12:07 PM

ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಈಗಾಗಲೇ ಬಿಸಿಸಿಐ ಮತ್ತು ಗಂಭೀರ್ ನಡುವೆ ಒಪ್ಪಂದವಾಗಿದ್ದು, ಇನ್ನು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ವರದಿಯಾಗಿದೆ.

1 / 6
ಪ್ರಸ್ತುತ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ಮುಕ್ತಾಯಗೊಳ್ಳಲಿದೆ. ಇದಾದ ಬಳಿಕ ಗೌತಮ್ ಗಂಭೀರ್ ಅಧಿಕಾರ ಸ್ವೀಕರಿಸಲಿದ್ದಾರೆ. ವಿಶೇಷ ಎಂದರೆ ಗಂಭೀರ್ ಅವರ ಆಗಮನದೊಂದಿಗೆ ಭಾರತ ಟಿ20 ತಂಡದಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹೊರಬೀಳಲಿದ್ದಾರೆ.

2 / 6
ಅಂದರೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಇದುವೇ ಕೊನೆಯ ಚಾನ್ಸ್​. ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ಇಬ್ಬರು ಆಟಗಾರರ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಮುಗಿಯಲಿದೆ ಎಂದು ವರದಿಯಾಗಿದೆ. ಇದಾದ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಭಾರತ ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ತಿಳಿದು ಬಂದಿದೆ.

3 / 6
ಅಷ್ಟೇ ಅಲ್ಲದೆ ಗೌತಮ್ ಗಂಭೀರ್ ಮೊದಲು ಹೊಸ ಟಿ20 ತಂಡವನ್ನು ಕೂಡ ಕಟ್ಟಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇಲ್ಲಿ ಯಾರು ನಾಯಕರಾಗಲಿದ್ದಾರೆ ಎಂಬುದು ಅಸ್ಪಷ್ಟ. ಹೀಗಾಗಿ ರೋಹಿತ್ ಶರ್ಮಾ ಅವರ ನಿರ್ಗಮನದ ಬಳಿಕ ಟಿ20 ತಂಡಕ್ಕೆ ಹೊಸ ಕ್ಯಾಪ್ಟನ್ ಯಾರಾಗಲಿದ್ದಾರೆ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬರಲಿದೆ.

4 / 6
ಅದರಂತೆ ಗೌತಮ್ ಗಂಭೀರ್ ಆವರ ಆಗಮನದೊಂದಿಗೆ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಈ ಬದಲಾವಣೆಯೊಂದಿಗೆ 37 ವರ್ಷದ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕೆರಿಯರ್ ಮುಗಿಯಲಿದೆಯಾ?  ಅಥವಾ ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೂ ಅವರೇ ನಾಯಕರಾಗಿ ಮುಂದುವರೆಯಲಿದ್ದಾರಾ ಎಂಬುದೇ ಪ್ರಶ್ನೆ.

5 / 6
ಏಕೆಂದರೆ ಗೌತಮ್ ಗಂಭೀರ್ ಅವರು 2027ರವರೆಗೆ ಭಾರತ ತಂಡದ ಕೋಚ್ ಹುದ್ದೆಯಲ್ಲಿರಲಿದ್ದಾರೆ. ಇದರ ನಡುವೆ 2025 ರಲ್ಲಿ ಚಾಂಪಿಯನ್ಸ್ ಟ್ರೋಫಿ, 2026ರಲ್ಲಿ ಟಿ20 ವಿಶ್ವಕಪ್ ಮತ್ತು 2027 ರಲ್ಲಿ ಏಕದಿನ ವಿಶ್ವಕಪ್ ಜರುಗಲಿದೆ. ಈ ಮೂರು ಟೂರ್ನಿಗಳನ್ನು ಗಮನದಲ್ಲಿರಿಸಿ ಭಾರತ ತಂಡಕ್ಕೆ ನೂತನ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ಹೀಗಾಗಿ ಗಂಭೀರ್ ಎಂಟ್ರಿಯೊಂದಿಗೆ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯವಾದರೂ ಅಚ್ಚರಿಪಡಬೇಕಿಲ್ಲ.

6 / 6
Follow us
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ

ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ

‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​

ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ