AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮ್ ಗಂಭೀರ್ ಮಾರ್ಮಿಕ ಉತ್ತರ: ರೋಹಿತ್ ಶರ್ಮಾಗೆ ಕಿಕ್ ಔಟ್ ಭೀತಿ

Australia vs India: 2024 ರಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 26 ಟೆಸ್ಟ್ ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 619 ರನ್​ಗಳು ಮಾತ್ರ. ಅಂದರೆ 24.76ರ ಸರಾಸರಿಯಲ್ಲಿ ಮಾತ್ರ ಹಿಟ್​ಮ್ಯಾನ್ ರನ್​ಗಳಿಸಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಈವರೆಗೆ ಕಲೆಹಾಕಿರುವ ಒಟ್ಟು ರನ್​ಗಳು ಕೇವಲ 31 ಮಾತ್ರ. ಹೀಗಾಗಿ ಸಿಡ್ನಿ ಟೆಸ್ಟ್​ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈ ಬಿಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jan 02, 2025 | 10:55 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 5ನೇ ಪಂದ್ಯವು ನಾಳೆಯಿಂದ (ಜ.3) ಶುರುವಾಗಲಿದೆ. ಸಿಡ್ನಿಯ ಎಸ್​ಸಿಜಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುವುದಿಲ್ಲವೇ? ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನೀಡಿರುವ ಹೇಳಿಕೆ.

1 / 6
ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಗೌತಮ್ ಗಂಭಿರ್​ಗೆ ನಾಳಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದ ಭಾಗವಾಗಲಿದ್ದಾರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಗಂಭೀರ್ ನೀಡಿರುವ ಉತ್ತರ... ಪಿಚ್ ನೋಡಿದ ಬಳಿಕ ಪ್ಲೇಯಿಂಗ್ ಇಲೆವೆನ್ ರೂಪಿಸುತ್ತೇನೆ ಎಂದು.

2 / 6
ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ? ರೋಹಿತ್ ಶರ್ಮಾ ಕೊನೆಯ ಟೆಸ್ಟ್ ಪಂದ್ಯವನ್ನು ಆಡುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ನಾಳೆ ಪಿಚ್ ನೋಡಿದ ನಂತರ ನಾವು ಪ್ಲೇಯಿಂಗ್ ಇಲೆವೆನ್ ಅನ್ನು ನಿರ್ಧರಿಸುತ್ತೇವೆ ಎಂದಿದ್ದಾರೆ. ಅಲ್ಲದೆ ಆಡುವ ಬಳಗವನ್ನು ಬಹಿರಂಗಪಡಿಸಲು ನಿರಾಕರಿಸಿದರು.

3 / 6
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಗೌತಮ್ ಗಂಭೀರ್​ ನೇರವಾಗಿ ರೋಹಿತ್ ಶರ್ಮಾ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಬಹುದಿತ್ತು. ಅಥವಾ ನಾಯಕನಾಗಿರುವ ಕಾರಣ ಅವರು ಪ್ಲೇಯಿಂಗ್ ಇಲೆವೆನ್​ನಲ್ಲಿ ಇರಲಿದ್ದಾರೆ ಎಂಬುದನ್ನು ಸಹ ಖಚಿತಪಡಿಸಬಹುದಿತ್ತು. ಆದರೆ ಇವರೆಡನ್ನೂ ಗಂಭೀರ್ ಹೇಳಿಲ್ಲ ಎಂಬುದು ಅಚ್ಚರಿ. ಹೀಗಾಗಿಯೇ ಇದೀಗ ಸಿಡ್ನಿ ಟೆಸ್ಟ್​ನಿಂದ ರೋಹಿತ್ ಶರ್ಮಾ ಹೊರಬೀಳಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಒಟ್ಟಿನಲ್ಲಿ ಕಳಪೆ ಫಾರ್ಮ್​ನಲ್ಲಿರುವ ರೋಹಿತ್ ಶರ್ಮಾ ಅವರನ್ನು ಸಿಡ್ನಿ ಟೆಸ್ಟ್ ಪಂದ್ಯದಿಂದ ಕೈ ಬಿಟ್ಟು, ಜಸ್​ಪ್ರೀತ್ ಬುಮ್ರಾಗೆ ಮತ್ತೆ ನಾಯಕತ್ವ ನೀಡಲಿದ್ದಾರಾ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಬಾರಿಯ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಿದ್ದರು. ಅಲ್ಲದೆ ಆ ಪಂದ್ಯದಲ್ಲಿ ಭಾರತ ತಂಡ 295 ರನ್​​ಗಳ ಅಮೋಘ ಜಯ ಸಾಧಿಸಿತ್ತು.

5 / 6
ಇದಾದ ಬಳಿಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಮಳೆಯ ಕಾರಣ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಕೊನೆಯ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಸರಣಿ ನಿರ್ಣಾಯಕ. ಈ ಮ್ಯಾಚ್​ನಲ್ಲಿ ಗೆದ್ದರೆ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬಹುದು. ಹೀಗಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ ಅವರನ್ನು ಕೈ ಬಿಟ್ಟು ಮತ್ತೆ ಜಸ್​ಪ್ರೀತ್ ಬುಮ್ರಾಗೆ ಕ್ಯಾಪ್ಟನ್ಸಿ ನೀಡುತ್ತಾರಾ ಎಂಬುದೇ ಈಗ ಕುತೂಹಲ.

6 / 6

Published On - 10:53 am, Thu, 2 January 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ