AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

Gautam Gambhir: ಗೌತಮ್ ಗಂಭೀರ್ ಭಾರತದ ಮುಖ್ಯ ಕೋಚ್ ಆಗಿ 2026 ರ ಟಿ20 ವಿಶ್ವಕಪ್ ಮತ್ತು 2025 ರ ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿದ್ದಾರೆ. ಯುವ ಪಡೆಯನ್ನು ವಿಶ್ವ ಚಾಂಪಿಯನ್ ಮಾಡುವುದರಲ್ಲಿ ಅವರ ಪಾತ್ರ ಪ್ರಮುಖ. ಆಟಗಾರನಾಗಿ (2007 ಟಿ20, 2011 ಏಕದಿನ ವಿಶ್ವಕಪ್) ಮತ್ತು ಕೋಚ್ ಆಗಿ ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಗಂಭೀರ್ ಅವರ ಅನನ್ಯ ಸಾಧನೆಯಾಗಿದೆ.

ಪೃಥ್ವಿಶಂಕರ
|

Updated on: Mar 09, 2026 | 5:39 PM

Share
ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ತಂಡದ ಈ ಐತಿಹಾಸಿದ ಸಾಧನೆಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾತ್ರವೂ ಪ್ರಮುಖವಾಗಿದೆ. ಯುವಪಡೆಯನ್ನು ಬಲಿಷ್ಠಗೊಳಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡುವುದಕ್ಕೆ ಗಂಭೀರ್ ಸಾಕಷ್ಟು ಶ್ರಮಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

1 / 5
2024 ರ ಟಿ20 ವಿಶ್ವಕಪ್ ಬಳಿಕ ದಿಗ್ಗಜರಾದ ರೋಹಿತ್, ಕೊಹ್ಲಿ, ಜಡೇಜಾ ಈ ಮಾದರಿಗೆ ವಿದಾಯ ಹೇಳಿದರು. ಆ ಬಳಿಕ ಯುವ ಆಟಗಾರರನ್ನು ವಿಶ್ವಕಪ್​ಗೆ ಸಿದ್ಧಪಡಿಸುವ ಜವಾಬ್ದಾರಿ ಹೊತ್ತ ಗಂಭೀರ್, ಅದರ ಫಲಿತಾಂಶವನ್ನು ವಿಶ್ವಕಪ್ ಗೆಲ್ಲುವ ಮೂಲಕ ತೋರಿಸಿದ್ದಾರೆ. ಈ ಗೆಲುವಿನೊಂದಿಗೆ ಗಂಭೀರ್ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಮಾಡದ ಸಾಧನೆ ಮಾಡಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ಮೊದಲ ಮುಖ್ಯ ಕೋಚ್ ಕೂಡ ಆಗಿದ್ದಾರೆ.

2 / 5
ವಾಸ್ತವವಾಗಿ ಟೀಂ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಎರಡು ಐಸಿಸಿ ಪ್ರಶಸ್ತಿಗಳನ್ನು ದೇಶಕ್ಕೆ ಗೆಲ್ಲಿಸಿಕೊಟ್ಟಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಗೌತಮ್ ಗಂಭೀರ್ ಅವರಿಗೆ ಎರಡನೇ ಐಸಿಸಿ ಪ್ರಶಸ್ತಿಯನ್ನು ತಂದುಕೊಟ್ಟಿದೆ.

3 / 5
ಟಿ20 ವಿಶ್ವಕಪ್​ಗೂ ಮುನ್ನ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು. ಅದು ಕೋಚ್ ಆಗಿ ಗಂಭೀರ್ ಅವರ ಮೊದಲ ಐಸಿಸಿ ಪ್ರಶಸ್ತಿಯಾಗಿತ್ತು. ಇದೀಗ 2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುಖ್ಯ ಕೋಚ್ ಆಗಿ ಮುನ್ನಡೆಸುವ ಮೂಲಕ, ಗೌತಮ್ ಗಂಭೀರ್ ಆಟಗಾರ ಮತ್ತು ಕೋಚ್ ಆಗಿ ಎರಡು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 5
ಆಟಗಾರನಾಗಿ ಗೌತಮ್ ಗಂಭೀರ್ 2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ಗೆಲ್ಲುವಲ್ಲೊ ಪ್ರಮುಖ ಪಾತ್ರವಹಿಸಿದ್ದರು. ಈ ಎರಡೂ ಫೈನಲ್​ಗಳಲ್ಲೂ ಗಂಭೀರ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡದ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಇದೀಗ ಗಂಭೀರ್ ಮುಖ್ಯ ಕೋಚ್ ಆಗಿ ತಂಡವನ್ನು ಎರಡೆರಡು ಬಾರಿ ಚಾಂಪಿಯನ್ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ