Gautam Gambhir: ಜಯ್ ಶಾ – ಗಂಭೀರ್ ಭೇಟಿ: ಜಿಜಿ ಟೀಮ್ ಇಂಡಿಯಾದ ಮುಂದಿನ ಕೋಚ್?
IPL 2024: ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
1 / 5
ಐಪಿಎಲ್ ಸೀಸನ್ 17 ರ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಭೇಟಿಯಾಗಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಜಯ್ ಶಾ ವಿಶೇಷ ಅತಿಥಿಯಾಗಿ ಕಾಣಿಸಿಕೊಂಡಿದ್ದರು.
2 / 5
ಅಲ್ಲದೆ ಪಂದ್ಯದ ಬಳಿಕ ಕೆಕೆಆರ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಜಯ್ ಶಾ ಮಾತುಕತೆ ನಡೆಸಿದರು. ಈ ಮಾತುಕತೆಯ ಬೆನ್ನಲ್ಲೇ ಗಂಭೀರ್ ಅವರು ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಇತ್ತೀಚೆಗೆ ಜಯ್ ಶಾ ನೀಡಿದ್ದ ಹೇಳಿಕೆ.
3 / 5
ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸುವಲ್ಲಿ ನಾವು ಗಮನಹರಿಸಿದ್ದೇವೆ. ಟೀಮ್ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ಕೋಚ್ ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ ಭಾರತೀಯರು ಕೋಚ್ ಆದರೆ ಉತ್ತಮ ಎಂದು ಜಯ್ ಶಾ ಹೇಳಿದ್ದರು.
4 / 5
ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಸಂಪರ್ಕಿಸಿದೆ ಎಂದು ವರದಿಯಾಗಿತ್ತು. ಇದೀಗ ಬಿಸಿಸಿಐ ಕಾರ್ಯದರ್ಶಿ ಹಾಗೂ ಜಯ್ ಶಾ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಖಾಸಗಿಯಾಗಿ ತುಸು ಹೊತ್ತು ಮಾತನಾಡಿಕೊಂಡಿದ್ದಾರೆ.
5 / 5
ಇದೀಗ ಜಯ್ ಶಾ ಅವರು ಗಂಭೀರ್ ಅವರೊಂದಿಗೆ ಕೋಚ್ ಹುದ್ದೆ ಬಗ್ಗೆ ಚರ್ಚಿಸಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಬಳಿಕ ಟೀಮ್ ಇಂಡಿಯಾದ ಮುಂದಿನ ಕೋಚ್ ಆಗಿ ಗೌತಮ್ ಗಂಭೀರ್ (GG) ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.