Gautam Gambhir: ಕೋಚ್ ರಾಹುಲ್ ದ್ರಾವಿಡ್ ಉತ್ತರಾಧಿಕಾರಿ ಗೌತಮ್ ಗಂಭೀರ್: ವರದಿ

Gautam Gambhir: ಐಪಿಎಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ.

|

Updated on: Jun 01, 2024 | 1:52 PM

ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಭಾರತ ತಂಡದ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿದೆ. ಟಿ20 ವಿಶ್ವಕಪ್ ಮುಕ್ತಾಯದೊಂದಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

1 / 6
ಭಾರತ ತಂಡದ ಪ್ರಸ್ತುತ ತರಬೇತುದಾರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಜೂನ್‌ನಲ್ಲಿ ಕೊನೆಗೊಳ್ಳಲಿದ್ದು, ಹೀಗಾಗಿ ಕಳೆದ ತಿಂಗಳು ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅದರಂತೆ ಇದೀಗ ಗೌತಮ್ ಗಂಭೀರ್ ಅವರ ಹೆಸರು ಫೈನಲ್ ಆಗಿದ್ದು, ಶೀಘ್ರದಲ್ಲೇ ಅವರು​ ಕೋಚ್ ಆಗಿ ನೇಮಕಗೊಳ್ಳಲಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿಯಲ್ಲಿ ಹೇಳಲಾಗಿದೆ.

2 / 6
ಈ ಬಾರಿಯ ಐಪಿಎಲ್​ ಮುಕ್ತಾಯದ ಬೆನ್ನಲ್ಲೇ ಗಂಭೀರ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗುತ್ತಿದೆ ಎಂದು ಐಪಿಎಲ್ ಫ್ರಾಂಚೈಸಿ​ ಮಾಲೀಕರೊಬ್ಬರು ಬಹಿರಂಗಪಡಿಸಿದ್ದರು. ಇದರೊಂದಿಗೆ ಟೀಮ್ ಇಂಡಿಯಾ ಪರ ಗೌತಿ ಹೊಸ ಇನಿಂಗ್ಸ್ ಆರಂಭಿಸುವುದು ಖಚಿತವಾಗಿತ್ತು.

3 / 6
ಇದೀಗ ಗೌತಮ್ ಗಂಭೀರ್ ಹೆಡ್ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತ ಎಂದು ಇಂಡಿಯಾ ಟುಡೆ ಕೂಡ ವರದಿ ಮಾಡಿದೆ. ಹೀಗಾಗಿ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಟೀಮ್ ಇಂಡಿಯಾದ ಜವಾಬ್ದಾರಿಯುತ ಹುದ್ದೆಯಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಖಚಿತ ಎಂದೇ ಹೇಳಬಹುದು.

4 / 6
ಅಂದಹಾಗೆ ಗೌತಮ್ ಗಂಭೀರ್ ಇದುವರೆಗೆ ಯಾವುದೇ ತಂಡಕ್ಕೆ ಕೋಚಿಂಗ್ ನೀಡಿ ಅನುಭವ ಹೊಂದಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ ಮೂರು ಸೀಸನ್​ಗಳಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದ ಗೌತಮ್ ಗಂಭೀರ್ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಗಂಭೀರ್ ಅವರ ಮಾರ್ಗದರ್ಶನದಲ್ಲೇ ಕೆಕೆಆರ್ ತಂಡ ಈ ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ವಿಶೇಷ.

5 / 6
ಈ ಅಮೋಘ ಗೆಲುವಿನ ಬಳಿಕ ಕೆಕೆಆರ್ ತಂಡದ ಮೆಂಟರ್ ಅನ್ನೇ ಟೀಮ್ ಇಂಡಿಯಾದ ಕೋಚ್ ಹುದ್ದೆಗೆ ನೇಮಿಸಲು ಬಿಸಿಸಿಐ ಕೂಡ ಆಸಕ್ತಿವಹಿಸಿದೆ. ಅದರಂತೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಮೂಲಕ ಮುಖ್ಯ ಕೋಚ್ ಪಾತ್ರಕ್ಕಾಗಿ ಗಂಭೀರ್ ಅವರ ಸಂದರ್ಶನ ನಡೆಸಲಿದೆಯಾ ಅಥವಾ ನೇರವಾಗಿ ಆಯ್ಕೆ ಮಾಡಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ

Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್