ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ

India squad for 2025 Champions Trophy: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದ ವಿಷಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿರುವ ವಿಷಯ ಬಹಿರಂಗವಾಗಿದೆ. ಇಲ್ಲಿ ಗಂಭೀರ್​ಗಿಂತ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅವರ ನಿಲುವಿಗೆ ಹೆಚ್ಚಿನ ಮಣೆ ನೀಡಿರುವುದು ಸ್ಪಷ್ಟ.

ಝಾಹಿರ್ ಯೂಸುಫ್
|

Updated on: Jan 19, 2025 | 11:53 AM

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಟೀಮ್ ಇಂಡಿಯಾ ಪ್ರಕಟಣೆಗೆ ಶನಿವಾರ ಮಧ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು 3 ಗಂಟೆಗೆ. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಇದೀಗ ಬಹಿರಂಗವಾಗಿದೆ.

1 / 6
ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿ ರೋಹಿತ್ ಶರ್ಮಾ ಭಾರತ ತಂಡವನ್ನು ಆಯ್ಕೆ ಮಾಡಿದ್ದರು. ಈ ಪಟ್ಟಿಯೊಂದಿಗೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ ವಾಂಖೆಡೆ ಸ್ಟೇಡಿಯಂನಲ್ಲಿ ಪ್ರೆಸ್​ ಕಾನ್ಫರೆನ್ಸ್ ರೂಮ್​ಗೆ 12 ಗಂಟೆಗೆ ಆಗಮಿಸಿದ್ದರು. ಆದರೆ ಇನ್ನೇನು ಟೀಮ್ ಇಂಡಿಯಾ ಘೋಷಣೆಯಾಗಲಿದೆ ಅನ್ನುವಷ್ಟರಲ್ಲಿ ತೆರೆಮರೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

2 / 6
ಈ ಚರ್ಚೆಯ ನಡುವೆ ಗೌತಮ್ ಗಂಭೀರ್ ಟೀಮ್ ಇಂಡಿಯಾ ಉಪ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡುವಂತೆ ಪಟ್ಟು ಹಿಡಿರುವುದಾಗಿ ವರದಿಯಾಗಿದೆ. ಆದರೆ ಅಜಿತ್ ಅಗರ್ಕರ್ ಹಾಗೂ ರೋಹಿತ್ ಶರ್ಮಾ, ಶುಭ್​ಮನ್ ಗಿಲ್​ ಪರ ವಹಿಸಿದ್ದರು. ಅಲ್ಲದೆ ಅಗರ್ಕರ್ ತಮ್ಮ ನಿರ್ಧಾರವನ್ನು ಬದಲಿಸಲು ಸಿದ್ಧರಿರಲಿಲ್ಲ. ಹೀಗಾಗಿ ಗಿಲ್ ಅವರನ್ನೇ ವೈಸ್ ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

3 / 6
ಇನ್ನು ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ನೀಡಬೇಕೆಂದು ಗೌತಮ್ ಗಂಭೀರ್ ಆಗ್ರಹಿಸಿದ್ದರು. ಆದರೆ ರೋಹಿತ್ ಶರ್ಮಾ, ರಿಷಭ್ ಪಂತ್ ಪರ ನಿಂತಿದ್ದರು. ಪಂತ್​ಗಿಂತ ಸ್ಯಾಮ್ಸನ್ ಅವರ ಪ್ರದರ್ಶನ ಉತ್ತಮವಾಗಿದೆ ಎಂದು ಗಂಭೀರ್ ಮನವೊಲಿಸಲು ಯತ್ನಿಸಿದರೂ, ರೋಹಿತ್ ಶರ್ಮಾ ಹಾಗೂ ಅಜಿತ್ ಅಗರ್ಕರ್ ರಿಷಭ್ ಪಂತ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

4 / 6
ಹೀಗೆ ಎರಡುವರೆ ಗಂಟೆಗಳ ಕಾಲ ನಡೆದ ಈ ಚರ್ಚೆಯಲ್ಲಿ ಕೊನೆಗೂ ರೋಹಿತ್ ಶರ್ಮಾ ತಮಗೆ ಬೇಕಾದಂತಹ ತಂಡವನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಹಿಟ್​ಮ್ಯಾನ್ ಬಯಕೆಯಂತೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಬಲಿಷ್ಠ ತಂಡವನ್ನು ರೂಪಿಸಿದೆ. ಆದರೆ ದೀರ್ಘಕಾಲ ನಡೆದ ಈ ಚರ್ಚೆಯಿಂದಾಗಿ ಇದೀಗ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿರುವುದಂತು ಸುಳ್ಳಲ್ಲ.

5 / 6
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

6 / 6
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್