ಸೋಲುಗಳ ಸರಮಾಲೆ… ಭಾರತ ಟೆಸ್ಟ್ ತಂಡಕ್ಕೆ ‘ಗಂಭೀರ’ ಸಮಸ್ಯೆ

Updated on: Jun 25, 2025 | 10:54 AM

Gautam Gambhir: ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಟೀಮ್ ಇಂಡಿಯಾ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆದರೆ ಟೆಸ್ಟ್ ವಿಷಯಕ್ಕೆ ಬಂದರೆ ತೀರಾ ಕಳಪೆ ಮಟ್ಟದಲ್ಲಿದೆ. ಇದಕ್ಕೆ ಸಾಕ್ಷಿ ಗಂಭೀರ್ ಮುಂದಾಳತ್ವದಲ್ಲಿ ಭಾರತ ತಂಡವು 7 ಟೆಸ್ಟ್ ಪಂದ್ಯಗಳನ್ನು ಸೋತಿರುವುದು.

1 / 11
ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ (Gautam Gambhir) ಗರಡಿಯಲ್ಲಿ ಭಾರತ ತಂಡವು ಈವರೆಗೆ 19 ಟೆಸ್ಟ್​ ಪಂದ್ಯಗಳನ್ನಾಡಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ ಏಳು ಪಂದ್ಯಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಗಂಭೀರ್ ಗರಡಿಯಲ್ಲಿ ಭಾರತ ಟೆಸ್ಟ್ ತಂಡವು ಅಧಃಪತನದತ್ತ ಸಾಗುತ್ತಿದೆ. ಇದಕ್ಕೆ ಸಾಕ್ಷಿ ಈ ಕೆಳಗಿನ ಅಂಕಿ ಅಂಶಗಳು...

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ (Gautam Gambhir) ಗರಡಿಯಲ್ಲಿ ಭಾರತ ತಂಡವು ಈವರೆಗೆ 19 ಟೆಸ್ಟ್​ ಪಂದ್ಯಗಳನ್ನಾಡಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ ಏಳು ಪಂದ್ಯಗಳಲ್ಲಿ ಎಂದರೆ ನಂಬಲೇಬೇಕು. ಅಂದರೆ ಗಂಭೀರ್ ಗರಡಿಯಲ್ಲಿ ಭಾರತ ಟೆಸ್ಟ್ ತಂಡವು ಅಧಃಪತನದತ್ತ ಸಾಗುತ್ತಿದೆ. ಇದಕ್ಕೆ ಸಾಕ್ಷಿ ಈ ಕೆಳಗಿನ ಅಂಕಿ ಅಂಶಗಳು...

2 / 11

2024 ರಲ್ಲಿ ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಝಿಲೆಂಡ್ 8 ವಿಕೆಟ್​ಗಳ ಜಯ ದಾಖಲಿಸಿತ್ತು. ಇದು 36 ವರ್ಷಗಳ ಬಳಿಕ ಭಾರತದಲ್ಲಿ ನ್ಯೂಝಿಲೆಂಡ್ ತಂಡಕ್ಕೆ ದಕ್ಕಿದ ಮೊದಲ ಟೆಸ್ಟ್ ಜಯ ಎಂಬುದು ವಿಶೇಷ. ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಳೆದ 19 ವರ್ಷಗಳಿಂದ ಗೆಲ್ಲುತ್ತಾ ಬಂದಿದ್ದ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟ ಕೂಡ ಇದರೊಂದಿಗೆ ಅಂತ್ಯವಾಗಿತ್ತು.

3 / 11

ಇನ್ನು ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ತವರಿನಲ್ಲಿ ಭಾರತ ತಂಡ ಕಲೆಹಾಕಿದ ಅತ್ಯಂತ ಕಡಿಮೆ ಸ್ಕೋರ್ ಎಂಬುದು ವಿಶೇಷ.

4 / 11

93 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಸರಣಿ ಸೋತಿದ್ದು ಕೂಡ ಗಂಭೀರ್ ಕೋಚ್ ಆದ ಮೇಲೆ. ಅಂದರೆ ಗೌತಮ್ ಗಂಭೀರ್ ಕೋಚಿಂಗ್​ನಲ್ಲಿ ಟೀಮ್ ಇಂಡಿಯಾ  ಕಿವೀಸ್ ವಿರುದ್ಧದ 9 ದಶಕಗಳ ಪಾರುಪತ್ಯಕ್ಕೆ ತೆರೆ ಎಳೆದಿದೆ.

5 / 11

ನ್ಯೂಝಿಲೆಂಡ್ ವಿರುದ್ಧದ ಸರಣಿ ಸೋಲಿನೊಂದಿಗೆ ತವರಿನಲ್ಲಿ ಭಾರತ ತಂಡದ 12 ವರ್ಷಗಳ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಅಲ್ಲದೆ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಸತತ ಟೆಸ್ಟ್ ಪಂದ್ಯಗಳನ್ನು ಸೋತು ನಿರಾಸೆ ಮೂಡಿಸಿದೆ.

6 / 11

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 19 ವರ್ಷಗಳ ಟೆಸ್ಟ್ ಗೆಲುವಿನ ನಾಗಾಲೋಟಕ್ಕೆ ತೆರೆ ಎಳೆದಿದ್ದ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲೂ ನ್ಯೂಝಿಲೆಂಡ್ ವಿರುದ್ಧ ಸೋತು 12 ವರ್ಷಗಳ ಗೆಲುವಿನ ಪರಂಪರೆಯನ್ನು ಅಂತ್ಯಗೊಳಿಸಿದೆ.

7 / 11

ಇವೆಲ್ಲಕ್ಕಿಂತ ಮುಖ್ಯವಾಗಿ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಭಾರತ ತಂಡವು ತವರಿನಲ್ಲಿ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಸೋತಿರಲಿಲ್ಲ. ಆದರೆ ಗಂಭೀರ್ ಕೋಚ್ ಆದ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ 3-0 ಅಂತರದಿಂದ ತವರಿನಲ್ಲಿ ಅವಮಾನಕರ ಸೋಲನುಭವಿಸಿದೆ.

8 / 11

ಇನ್ನು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 10 ವರ್ಷಗಳಿಂದ ಪಾರುಪತ್ಯ ಮರೆದಿತ್ತು. ಆದರೆ ಕಳೆದ ಬಾರಿ ಗಂಭೀರ್ ಮುಂದಾಳತ್ವದಲ್ಲಿ ಆಸೀಸ್ ಪ್ರವಾಸ ಮಾಡಿದ್ದ ಟೀಮ್ ಇಂಡಿಯಾ 3-1 ಅಂತರದಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ ಮೂಲಕ ದಶಕದ ಗೆಲುವಿನ ನಾಗಾಲೋಟವನ್ನು ಸಹ ಅಂತ್ಯಗೊಳಿಸಿದೆ.

9 / 11

ಇಷ್ಟೇ ಅಲ್ಲದೆ  ಭಾರತ ತಂಡವು ಕಳೆದ ಎರಡು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (2021, 2023) ಆಡಿತ್ತು. ಆದರೆ ಗಂಭೀರ್ ಕೋಚ್ ಆದ ಬಳಿಕ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ 2025 ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲು ವಿಫಲವಾಗಿದೆ. ಅಂದರೆ ಟೆಸ್ಟ್​ ಕ್ರಿಕೆಟ್​ನ ಬಲಿಷ್ಠ ತಂಡ ಎಂದೇ ಗುರುತಿಸಿಕೊಂಡಿದ್ದ ಭಾರತ ತಂಡವು ಈ ಬಾರಿ ಫೈನಲ್​ಗೆ ಪ್ರವೇಶಿಸಲು ವಿಫಲವಾಗುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ.

10 / 11

ಹಾಗೆಯೇ ಹೆಡಿಂಗ್ಲೆ ಮೈದಾನದಲ್ಲಿ 77 ವರ್ಷಗಳ ಬಳಿಕ ಇಂಗ್ಲೆಂಡ್ ತಂಡವು ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಮೈದಾನದಲ್ಲಿ 1948 ರಲ್ಲಿ ಆಸ್ಟ್ರೇಲಿಯಾ 404 ರನ್​ ಚೇಸ್ ಮಾಡಿದ್ದು ಈವರೆಗಿನ ದಾಖಲೆಯಾಗಿತ್ತು. ಆ ಬಳಿಕ ಯಾವುದೇ ತಂಡ 370+ ಸ್ಕೋರ್ ಬೆನ್ನತ್ತಿ ಗೆದ್ದಿರಲಿಲ್ಲ. ಆದರೆ ಈ ಬಾರಿ ಟೀಮ್ ಇಂಡಿಯಾ ನೀಡಿದ 371 ರನ್​ಗಳ ಗುರಿಯನ್ನು 82 ಓವರ್​ಗಳಲ್ಲಿ ಬೆನ್ನತ್ತಿ ಇಂಗ್ಲೆಂಡ್ ಅಮೋಘ ಗೆಲುವು ದಾಖಲಿಸಿದೆ. 

11 / 11

ಅಂದರೆ ಗೌತಮ್ ಗಂಭೀರ್ ಕೋಚ್ ಆದ ಬಳಿಕ ಭಾರತ ತಂಡವು ಹಲವು ವರ್ಷಗಳ ಪಾರುಪತ್ಯಕ್ಕೆ ತೆರೆ ಎಳೆದಿದೆ. ಅದು ಕೂಡ ಹೀನಾಯ ಸೋಲುಗಳೊಂದಿಗೆ. ಅದರಲ್ಲೂ ಕಳೆದ 19 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 7 ಮ್ಯಾಚ್​ಗಳಲ್ಲಿ ಮಾತ್ರ. ಇದರಲ್ಲಿ ನಾಲ್ಕು ಗೆಲುವುಗಳು ದುರ್ಬಲ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ್ ವಿರುದ್ಧ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಗಂಭೀರ್ ಗರಡಿಯಲ್ಲಿ ಭಾರತ ಟೆಸ್ಟ್ ತಂಡವು ಅಧಃಪತನದತ್ತ ಸಾಗುತ್ತಿರುವುದು ಸ್ಪಷ್ಟ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us