IND vs AUS ODI Series: ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಗ್ಲೆನ್ ಮ್ಯಾಕ್ಸ್‌ವೆಲ್ ಕಮ್ಬ್ಯಾಕ್
Australia Squad for ODI series against India: ಕ್ರಿಕೆಟ್ ಆಸ್ಟ್ರೇಲಿಯಾ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 16 ಮಂದಿ ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ. ಅಚ್ಚರಿ ಎಂದರೆ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೆಸರು ಇದರಲ್ಲಿದೆ.
1 / 8
ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಬಾರ್ಡರ್- ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಬಾರಿಯೂ ಟ್ರೋಫಿಯನ್ನು ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿರುವ ಆಸೀಸ್ ಉಳಿದಿರುವ ಎರಡು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಲು ಹೋರಾಡಬೇಕಿದೆ.
2 / 8
ಆಡಿರುವ ಎರಡೂ ಟೆಸ್ಟ್ ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿರುವ ಆಸ್ಟ್ರೇಲಿಯಾ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬರುತ್ತಿದೆ. ಇದರ ನಡುವೆ ಡೇವಿಡ್ ವಾರ್ನರ್ ಸೇರಿದಂತೆ ಕೆಲ ಆಟಗಾರರು ದಿಢೀರ್ ತವರಿಗೆ ಮರಳಿದ್ದಾರೆ. ಹೀಗಿರುವಾಗ ಬಾರ್ಡರ್- ಗವಾಸ್ಕರ್ ಟ್ರೋಫಿ ಕಳೆದುಕೊಂಡಿರುವ ಕಾಂಗರೂ ಪಡೆ ಏಕದಿನ ಸರಣಿ ಮಲೆ ಕಣ್ಣಿಟ್ಟಿದೆ.
3 / 8
ಹೌದು, ಕ್ರಿಕೆಟ್ ಆಸ್ಟ್ರೇಲಿಯಾ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 16 ಮಂದಿ ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟ ಮಾಡಿದೆ. ಅಚ್ಚರಿ ಎಂದರೆ ಇಂಜುರಿಯಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೆಸರು ಇದರಲ್ಲಿದೆ.
4 / 8
ಮ್ಯಾಕ್ಸ್‌ವೆಲ್ ಕಳೆದ ವರ್ಷ ನವೆಂಬರ್ನಲ್ಲಿ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ವೇಳೆ ಟೆನ್ನಿಸ್ ಅಂಕಣದಲ್ಲಿ ರನ್ನಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಎಡಗಾಲು ಮುರಿದುಕೊಂಡಿದ್ದರು. ಇದೀಗ ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿರುವ ಮ್ಯಾಕ್ಸಿ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.
5 / 8
ಮ್ಯಾಕ್ಸ್‌ವೆಲ್ ಜೊತೆಗೆ ಮಿಚೆಲ್ ಮಾರ್ಶ್ ತಂಡ ಸೇರಿಕೊಂಡಿದ್ದಾರೆ. ಟೆಸ್ಟ್ ಸರಣಿಯಿಂದ ಹೊರಬಿದ್ದಿರುವ ಡೇವಿಡ್ ವಾರ್ನರ್ ಸ್ಥಾನ ಪಡೆದುಕೊಂಡಿದ್ದಾರೆ. ಜ್ಯೇ ರಿಚರ್ಡಸನ್ ಕೂಡ 16 ಮಂದಿಯ ಆಟಗಾರರಲ್ಲಿ ಕಾಣಿಸಿಕೊಂಡಿದ್ದಾರೆ.
6 / 8
ಪ್ಯಾಟ್ ಕಮಿನ್ಸ್ ನಾಯಕನಾಗಿ ತಂಡವನ್ನು ಮುನ್ನಡೆಸಿದರೆ ಕ್ಯಾಮ್ರೋನ್ ಗ್ರೀನ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಸೇರಿದಂತೆ ಅನೇಕ ಸ್ಟಾರ್ ಆಟಗಾರರು ತಂಡದಲ್ಲಿದ್ದಾರೆ. ಇಲ್ಲಿದೆ ನೋಡಿ ಭಾರತ ವಿರುದ್ಧದ ಏಕದಿನ ಸರಣಿಗೆ ಪ್ರಕಟವಗಿರುವ ಆಸ್ಟ್ರೇಲಿಯಾ ತಂಡ.
7 / 8
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್.
8 / 8
ಇಂಡೋ- ಆಸೀಸ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಮಾರ್ಚ್ 17 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಮಾರ್ಚ್ 19 ರಂದು ವಿಶಾಖಪಟ್ಟಣಂನ ಡಾ. ವೈಎಸ್. ರಾಜಶೇಖರ ರೆಡ್ಡಿ ಸ್ಟೇಡಿಯಂನಲ್ಲಿ ದ್ವಿತೀಯ ಪಂದ್ಯ ಹಾಗೂ ಅಂತಿಮ ತೃತೀಯ ಏಕದಿನ ಪಂದ್ಯ ಮಾರ್ಚ್ 22 ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.
Published On - 8:24 am, Thu, 23 February 23