AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ದಿಢೀರ್ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್​​ವೆಲ್

Glenn Maxwell  Retirement: ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 136 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3149 ಎಸೆತಗಳನ್ನು ಎದುರಿಸಿ ಒಟ್ಟು 3990 ರನ್ ಕಲೆಹಾಕಿದ್ದಾರೆ. ಹಾಗೆಯೇ 119 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 77 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 02, 2025 | 12:08 PM

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಏಕದಿನ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಾಗ್ಯೂ ಅವರು ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

1 / 5
ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸಿರುವುದಾಗಿ ಮ್ಯಾಕ್ಸ್​ವೆಲ್ ಹೇಳಿದ್ದಾರೆ.

2 / 5
ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 136 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ದ್ವಿಶತಕ ಹಾಗೂ 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

3 / 5
ಹಾಗೆಯೇ ಬೌಲಿಂಗ್ ಮೂಲಕ ಕೂಡ ಕೊಡುಗೆ ನೀಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 119 ಇನಿಂಗ್ಸ್​ಗಳಲ್ಲಿ ಚೆಂಡೆಸೆದಿದ್ದು, ಈ ವೇಳೆ 4002 ಎಸೆತಗಳಲ್ಲಿ  3644 ರನ್ ನೀಡುವ ಮೂಲಕ ಒಟ್ಟು 77 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಮ್ಯಾಕ್ಸ್​ವೆಲ್​ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ 3 ಸಾವಿರ ರನ್ ಹಾಗೂ 50 ಕ್ಕಿಂತ ಹೆಚ್ಚು ವಿಕೆಟ್ ಪಡೆದ ಆಲ್​ರೌಂಡರ್​ಗಳಲ್ಲಿ ಗುರುತಿಸಿಕೊಂಡಿದ್ದಾರೆ.

4 / 5
ಸದ್ಯ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಗ್ಲೆನ್ ಮ್ಯಾಕ್ಸ್​ವೆಲ್ 2026ರ ಟಿ20 ವಿಶ್ವಕಪ್ ಆಡುವ ವಿಶ್ವಾಸದಲ್ಲಿದ್ದಾರೆ. ಈ ವಿಶ್ವಕಪ್​ನೊಂದಿಗೆ 36 ವರ್ಷದ ಮ್ಯಾಕ್ಸಿ ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳುವ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ಆಸ್ಟ್ರೇಲಿಯಾ ಮ್ಯಾಕ್ಸ್​ವೆಲ್ ಆಡಲಿರುವ ಕೊನೆಯ ಟೂರ್ನಿ ಆಗಿರಲಿದೆ.

5 / 5
Follow us