AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೆನ್​ ಮ್ಯಾಕ್ಸ್​ವೆಲ್​​ನ ಸಿಡಿಲಬ್ಬರದ ಸೆಂಚುರಿಗೆ ವಿಶ್ವ ದಾಖಲೆ ನಿರ್ಮಾಣ

Glenn Maxwell Record: ಮೇಜರ್ ಲೀಗ್ ಕ್ರಿಕೆಟ್ (MLC 2025) ಟಿ20 ಟೂರ್ನಿಯಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲೂ ರೋಹಿತ್ ಶರ್ಮಾ ಅವರ 8 ಶತಕಗಳ ದಾಖಲೆಯನ್ನು ಸರಿಗಟ್ಟಿರುವ ಮ್ಯಾಕ್ಸ್​ವೆಲ್, ಇದೀಗ ವಿರಾಟ್ ಕೊಹ್ಲಿ ರೆಕಾರ್ಡ್ ಮುರಿಯುವ ಹೊಸ್ತಿಲಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 18, 2025 | 11:24 AM

Share
ಟಿ20 ಕ್ರಿಕೆಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್​ವೆಲ್ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ.

1 / 5
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೆ ಪ್ರಚಂಡ ಬ್ಯಾಟಿಂಗ್​ನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 10500 ರನ್​ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500+ ರನ್ ಕಲೆಹಾಕಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ವಿಶೇಷ ಎಂದರೆ ಗ್ಲೆನ್ ಮ್ಯಾಕ್ಸ್​ವೆಲ್ ಟಿ20 ಕ್ರಿಕೆಟ್​ನಲ್ಲಿ 10500+  ರನ್​ಗಳೊಂದಿಗೆ 170 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಇದರ ನಡುವೆ 8 ಭರ್ಜರಿ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 10500+ ರನ್ಸ್, 150+ ವಿಕೆಟ್ಸ್ ಹಾಗೂ 8 ಶತಕಗಳನ್ನು ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

3 / 5
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 8 ಶತಕ ಬಾರಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ಗ್ಲೆನ್ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ. ಮ್ಯಾಕ್ಸಿ ಅವರ ಈ ದಾಖಲೆಯ ಮುಂದಿರುವುದು ವಿರಾಟ್ ಕೊಹ್ಲಿ. ಕಿಂಗ್ಸ್​ ಕೊಹ್ಲಿ 9 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ ಬ್ಯಾಟ್​ನಿಂದ ಶತಕ ಮೂಡಿಬಂದರೆ ತೃತೀಯ ಸ್ಥಾನಕ್ಕೇರಬಹುದು.

4 / 5
ಇನ್ನು ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಬಾರಿಸಿದ 106 ರನ್​ಗಳ ನೆರವಿನೊಂದಿಗೆ ವಾಷಿಂಗ್ಟನ್ ಫ್ರೀಡಂ ತಂಡವು 20 ಓವರ್​ಗಳಲ್ಲಿ 208 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ತಂಡವು 16.3 ಓವರ್​ಗಳಲ್ಲಿ 95 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ವಾಷಿಂಗ್ಟನ್ ಫ್ರೀಡಂ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ