AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಮ್ಯಾಕ್ಸ್​ವೆಲ್ ಸಿಡಿಲಬ್ಬರಕ್ಕೆ ಹಿಟ್​ಮ್ಯಾನ್ ದಾಖಲೆ ಉಡೀಸ್

Glenn Maxwell Record: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಸ್ಪೋಟಕ ಸೆಂಚುರಿ ಸಿಡಿಸುವ ಮೂಲಕ ಆಸ್ಟ್ರೇಲಿಯಾ ತಂಡದ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶ್ವ ದಾಖಲೆವೊಂದನ್ನು ಮುರಿದಿದ್ದಾರೆ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Feb 12, 2024 | 6:59 AM

Share
ಅಡಿಲೇಡ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿದ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿದಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಗ್ಲೆನ್ ಮ್ಯಾಕ್ಸ್​ವೆಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​​ಗೆ ಒತ್ತು ನೀಡಿದ ಮ್ಯಾಕ್ಸಿ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 7
ಇದಾದ ಬಳಿಕ ಸಿಡಿಲಬ್ಬರ ಶುರು ಮಾಡಿದ ಮ್ಯಾಕ್ಸ್​ವೆಲ್ ಕೇವಲ 50 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5 ಶತಕಗಳನ್ನು ಬಾರಿಸಿರುವ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

3 / 7
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 5 ಶತಕ ಸಿಡಿಸಿದ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚುಟುಕು ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಐದು ಶತಕಗಳನ್ನು ಬಾರಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

4 / 7
ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 143 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ಅಳಿಸಿ ಹಾಕಿದ್ದಾರೆ.

5 / 7
ಮ್ಯಾಕ್ಸ್​ವೆಲ್ ಕೇವಲ 94 ಟಿ20 ಇನಿಂಗ್ಸ್​ಗಳಲ್ಲಿ 5 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 55 ಎಸೆತಗಳನ್ನು ಎದುರಿಸಿದ ಮ್ಯಾಕ್ಸ್​ವೆಲ್ 8 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಅಜೇಯ 120 ರನ್​ ಬಾರಿಸಿದರು. ಈ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಪೇರಿಸಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡ 207 ರನ್​ಗಳಿಸಿ 34 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

7 / 7
Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ

ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು

ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ

ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು

ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ

ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ

ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ

ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ