AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಕ್ಸ್​ವೆಲ್ ಸಿಕ್ಸರ್​ಗೆ ರೋಹಿತ್ ಶರ್ಮಾ ವಿಶ್ವ ದಾಖಲೆಯೇ ಉಡೀಸ್

Glenn Maxwell Records: ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಮೂರನೇ ಟಿ20 ಪಂದ್ಯದಲ್ಲಿ ಅಜೇಯ 62 ರನ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಸರಣಿ ಗೆಲ್ಲುವಲ್ಲಿ ಮ್ಯಾಕ್ಸ್​ವೆಲ್ ಪ್ರಮುಖ ಪಾತ್ರವಹಿಸಿದ್ದರು. ಈ ಗೆಲುವಿನ ಇನಿಂಗ್ಸ್​ನೊಂದಿಗೆ ಮ್ಯಾಕ್ಸಿ ಕೆಲ ದಾಖಲೆಗಳನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 18, 2025 | 8:30 AM

Share
ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ. ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಮ್ಯಾಕ್ಸ್​ವೆಲ್ 36 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 62 ರನ್ ಬಾರಿಸಿದ್ದರು.

1 / 5
ಈ ಎರಡು ಸಿಕ್ಸರ್​ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೇಸಿಂಗ್​ ವೇಳೆ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು.

2 / 5
ರೋಹಿತ್ ಶರ್ಮಾ ಟಿ20 ಪಂದ್ಯದ ಚೇಸಿಂಗ್ ವೇಳೆ 52 ಇನಿಂಗ್ಸ್​ಗಳಲ್ಲಿ 63 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಚೇಸಿಂಗ್ ವೇಳೆ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ದಾಂಡಿಗ ಎಂಬ ವಿಶ್ವ ದಾಖಲೆಯನ್ನು ಹಿಟ್​ಮ್ಯಾನ್ ತಮ್ಮದಾಗಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಗ್ಲೆನ್ ಮ್ಯಾಕ್ಸ್​ವೆಲ್ ಮುರಿದಿದ್ದಾರೆ.

3 / 5
ಆಸ್ಟ್ರೇಲಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಗ್ಲೆನ್ ಮ್ಯಾಕ್ಸ್​ವೆಲ್ ಚೇಸಿಂಗ್​​ನಲ್ಲಿ ಈವರೆಗೆ 44 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಬರೋಬ್ಬರಿ 64 ಸಿಕ್ಸ್​ ಸಿಡಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಚೇಸಿಂಗ್​ನ ಸಿಕ್ಸರ್ ಕಿಂಗ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಬಾರಿಸಿದ ಸ್ಫೋಟಕ 62 ರನ್​ಗಳ ಇನಿಂಗ್ಸ್​ಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪಡೆದ ದಾಖಲೆಯನ್ನು ಮ್ಯಾಕ್ಸ್​ವೆಲ್ ಸರಿಗಟ್ಟಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಡೇವಿಡ್ ವಾರ್ನರ್ ಹಾಗೂ ಮ್ಯಾಕ್ಸ್​ವೆಲ್ ತಲಾ 12 ಪಂದ್ಯ ಶ್ರೇಷ್ಠ ಪ್ರಶಸ್ತಿಗಳೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.

5 / 5