ಟಿ20 ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್
Glenn Maxwell Records: ಕ್ರಿಕೆಟ್ ಮೈದಾನದ 'ಬಿಗ್ ಶೋ' ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟ್‌ನಿಂದ ಮತ್ತೊಂದು ಸ್ಫೋಟಕ ದಾಖಲೆ ಹೊರಬಂದಿದೆ! ಡೇವಿಡ್ ವಾರ್ನರ್ ಮತ್ತು ಆರೋನ್ ಫಿಂಚ್ ಅವರಂತಹ ದಿಗ್ಗಜರ ಸಾಲಿಗೆ ಸೇರಿರುವ ಮ್ಯಾಕ್ಸಿ, ಟಿ20ಯಲ್ಲಿ 11,000 ರನ್ ಪೂರೈಸಿ ವಿಶ್ವದ ಅಪಾಯಕಾರಿ ಬ್ಯಾಟರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
Updated on: Apr 15, 2026 | 10:24 AM

ಪಾಕಿಸ್ತಾನ್ ಸೂಪರ್ ಲೀಗ್ನ 21ನೇ ಪಂದ್ಯದಲ್ಲಿ 21 ರನ್ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಟಿ20 ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕರಾಚಿಯಲ್ಲಿ ನಡೆದ ಇಸ್ಲಾಮಾಬಾದ್ ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್ಮೆನ್ ತಂಡದ ಪರ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 9 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದ್ದರು. ಈ ಇಪ್ಪತ್ತೊಂದು ರನ್ಗಳೊಂದಿಗೆ ಮ್ಯಾಕ್ಸ್‌ವೆಲ್ ಟಿ20 ಕ್ರಿಕೆಟ್ನಲ್ಲಿ 11 ಸಾವಿರ ರನ್ ಪೂರೈಸಿದ್ದಾರೆ.

ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 11 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಡೇವಿಡ್ ವಾರ್ನರ್ ಹಾಗೂ ಆರೋನ್ ಫಿಂಚ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಟಿ20 ಕ್ರಿಕೆಟ್ನಲ್ಲಿ ಈವರೆಗೆ 469 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್‌ವೆಲ್ 7142 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 8 ಶತಕ ಹಾಗೂ 58 ಅರ್ಧಶತಕಗಳೊಂದಿಗೆ ಒಟ್ಟು 11009 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮ್ಯಾಕ್ಸಿ 16ನೇ ಸ್ಥಾನ ಅಲಂಕರಿಸಿದ್ದಾರೆ.

ಇನ್ನು ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿದೆ. ತಮ್ಮ ಕೆರಿಯರ್ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದ ರನ್ ಸರದಾರ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.




