AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1,955 ಎಸೆತಗಳಲ್ಲಿ ಇತಿಹಾಸ ರಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

Glenn Maxwell Records: ಬಿಗ್ ಬ್ಯಾಷ್ ಲೀಗ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 1,955 ಎಸೆತಗಳಲ್ಲಿ ಎಂಬುದು ವಿಶೇಷ. ಈ ಮೂಲಕ ಕಳೆದ ಕೆಲ ವರ್ಷಗಳಿಂದ ಕ್ರಿಸ್ ಲಿನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮ್ಯಾಕ್ಸ್​ವೆಲ್ ಅಳಿಸಿ ಹಾಕಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 11, 2025 | 9:53 AM

Share
ಬಿಗ್ ಬ್ಯಾಷ್ ಲೀಗ್​ನ 28ನೇ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಸಿಡ್ನಿ ಸಿಕ್ಸರ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೆಲ್ಬೋರ್ನ್​ ಸ್ಟಾರ್ಸ್ ಪರ ಕಣಕ್ಕಿಳಿದ ಮ್ಯಾಕ್ಸ್​ವೆಲ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್​​ಗಳೊಂದಿಗೆ ಅಜೇಯ 58 ರನ್ ಚಚ್ಚಿದ್ದರು.

1 / 5
ಈ 58 ರನ್​ಗಳೊಂದಿಗೆ ಗ್ಲೆನ್ ಮ್ಯಾಕ್ಸ್​ವೆಲ್ ಬಿಗ್ ಬ್ಯಾಷ್ ಲೀಗ್​ನಲ್ಲಿ 3000 ರನ್ ಪೂರೈಸಿದ್ದಾರೆ. ಈ ಮೂಲಕ ಬಿಬಿಎಲ್​ನಲ್ಲಿ ಈ ಸಾಧನೆ ಮಾಡಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ ಅತೀ ವೇಗವಾಗಿ 3 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮ್ಯಾಕ್ಸ್​ವೆಲ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಲಿನ್ ಹೆಸರಿನಲ್ಲಿತ್ತು. 2011 ರಿಂದ ಬಿಗ್ ಬ್ಯಾಷ್ ಲೀಗ್ ಆಡುತ್ತಿರುವ ಕ್ರಿಸ್ ಲಿನ್ 2,016 ಎಸೆತಗಳ ಮೂಲಕ 3000 ರನ್ ಪೂರೈಸಿದ್ದರು. ಈ ಮೂಲಕ ಬಿಬಿಎಲ್​ನಲ್ಲಿ ಅತೀ ವೇಗವಾಗಿ 3 ಸಾವಿರ ರನ್​ಗಳ ಗಡಿದಾಟಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಕೇವಲ 1,955 ಎಸೆತಗಳಲ್ಲಿ 3 ಸಾವಿರ ರನ್ ಪೂರೈಸಿ ಗ್ಲೆನ್ ಮ್ಯಾಕ್ಸ್​ವೆಲ್ ಹೊಸ ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬಿಗ್ ಬ್ಯಾಷ್ ಲೀಗ್ ಇತಿಹಾಸದಲ್ಲೇ 2 ಸಾವಿರಕ್ಕೂ ಕಡಿಮೆ ಎಸೆತಗಳಲ್ಲಿ 3000 ರನ್​ಗಳ ಗಡಿದಾಟಿದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಬಿಗ್ ಬ್ಯಾಷ್ ಲೀಗ್​ನಲ್ಲಿ ಈವರೆಗೆ 110 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 2 ಶತಕ ಹಾಗೂ 19 ಅರ್ಧಶತಕಗಳೊಂದಿಗೆ ಒಟ್ಟು 3047 ರನ್ ಕಲೆಹಾಕಿದ್ದಾರೆ. ಇದೀಗ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಮ್ಯಾಕ್ಸ್​ವೆಲ್ ಅಗ್ರಸ್ಥಾನದಲ್ಲಿರುವ ಕ್ರಿಸ್ ಲಿನ್ (3908) ಅವರನ್ನು ಹಿಂದಿಕ್ಕಲು ಬರೋಬ್ಬರಿ 862 ರನ್​ಗಳನ್ನು ಕಲೆಹಾಕಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ