AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೆನ್ ಮ್ಯಾಕ್ಸ್​ವೆಲ್​ನ ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದ ವಿರಾಟ್ ಕೊಹ್ಲಿ

Glenn Maxwell - Virat Kohli: ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್​ರೌಂಡರ್ ಹಾಗೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಕುಚುಕು ಗೆಳೆಯರೇನು ನಿಜ. ಆದರೆ ಅದು ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ಬಳಿಕವಷ್ಟೇ. ಅದಕ್ಕೂ ಮುನ್ನ ಇಬ್ಬರ ನಡುವೆ ಸ್ನೇಹವಿರಲಿಲ್ಲ. ಇದನ್ನು ಖುದ್ದು ಮ್ಯಾಕ್ಸ್​ವೆಲ್ ಬಹಿರಂಗಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 30, 2024 | 12:54 PM

Share
ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ತುಂಬಾ ಆತ್ಮೀಯರು ಎಂಬುದು ಗೊತ್ತೇ ಇದೆ. ಅದರಲ್ಲೂ ಆರ್​ಸಿಬಿ ತಂಡದಲ್ಲಿ ಇಬ್ಬರು ಕುಚುಕುಗಳಾಗಿ ಕಾಣಿಸಿಕೊಂಡಿದ್ದರು. ಆದರೆ ಇದಕ್ಕೂ ಮುನ್ನ ಕಿಂಗ್ ಕೊಹ್ಲಿ ಹಾಗೂ ಮ್ಯಾಕ್ಸಿ ನಡುವೆ ಎಲ್ಲವೂ ಸರಿಯಿರಲಿಲ್ಲ ಎಂಬ ವಿಚಾರವೊಂದು ಇದೀಗ ಬಹಿರಂಗವಾಗಿದೆ.

1 / 6
2017ರ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿಯು ಭುಜದ ನೋವಿಗೆ ಒಳಗಾಗಿದ್ದರು. ಈ ನೋವನ್ನು ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಅಪಹಾಸ್ಯ ಮಾಡಿದ್ದರು. ಈ ಹೀಯಾಳಿಕೆಯಿಂದ ಮನ ನೊಂದಿದ್ದ ಕೊಹ್ಲಿ ಮ್ಯಾಕ್ಸ್​ವೆಲ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬ್ಲಾಕ್ ಮಾಡಿದ್ದರು.

2 / 6
ಆದರೆ ಈ ವಿಚಾರ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೆ ಗೊತ್ತೇ ಇರಲಿಲ್ಲ. 2022 ರಲ್ಲಿ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಮ್ಯಾಕ್ಸ್​ವೆಲ್ ಇನ್​ಸ್ಟಾಗ್ರಾಮ್​ನಲ್ಲಿ ಕೊಹ್ಲಿಯನ್ನು ಫಾಲೋ ಮಾಡಿ ಹುಡುಕಾಡಿದ್ದಾರೆ. ಆದರೆ ಎಲ್ಲೂ ಸಹ ಕೊಹ್ಲಿಯ ಅಕೌಂಟ್ ಕಾಣಿಸಿರಲಿಲ್ಲ.

3 / 6
ಈ ಬಗ್ಗೆ ಗ್ಲೆನ್ ಮ್ಯಾಕ್ಸ್​ವೆಲ್ ವಿರಾಟ್ ಕೊಹ್ಲಿಯನ್ನು ವಿಚಾರಿಸಿದ್ದಾರೆ. ಅಲ್ಲದೆ ನಿಮ್ಮ ಅಕೌಂಟ್ ಕಾಣಿಸುತ್ತಿಲ್ಲ...ನೀವೇನಾದರೂ ಬ್ಲಾಕ್ ಮಾಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಹೌದು ಎಂಬ ಉತ್ತರ ನೀಡಿದ್ದಾರೆ. ಯಾಕೆಂದು ಪ್ರಶ್ನಿಸಿದಾಗ ಐದು ವರ್ಷಗಳ ಹಳೆಯ ಕಥೆ ಹೇಳಿದ್ದಾರೆ.

4 / 6
2017 ರಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದ ವೇಳೆ ನೀನು ನನ್ನನ್ನು ಅಪಹಾಸ್ಯ ಮಾಡಿದ್ದರಿಂದ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಬ್ಲಾಕ್ ಮಾಡಿರುವುದಾಗಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಈ ವಿಚಾರವನ್ನು ಇದೀಗ ಗ್ಲೆನ್ ಮ್ಯಾಕ್ಸ್​ವೆಲ್ LiSTNR ಸ್ಪೋರ್ಟ್‌ ವಿಲೋ ಟಾಕ್ ಪಾಡ್‌ಕ್ಯಾಸ್ಟ್​ನಲ್ಲಿ ಬಹಿರಂಗಪಡಿಸಿದ್ದಾರೆ.

5 / 6
ಇದಾದ ಬಳಿಕ ನಾವು ಅತ್ಯುತ್ತಮ ಸ್ನೇಹಿತರಾಗಿದ್ದೇವೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನನ್ನನ್ನು ಸ್ವಾಗತಿಸಿದ ಮೊದಲ ವ್ಯಕ್ತಿ ಕೂಡ ವಿರಾಟ್ ಕೊಹ್ಲಿ. ಹೀಗಾಗಿಯೇ ಈಗ ನಾವಿಬ್ಬರು ಗುಡ್ ಫ್ರೆಂಡ್ಸ್ ಆಗಿದ್ದೇವೆ ಎಂದು ಗ್ಲೆನ್ ಮ್ಯಾಕ್ಸ್​ವೆಲ್ ತಿಳಿಸಿದ್ದಾರೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್